ಡಿ.22-23ರಂದು ಬೈಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ, ಬಿಎಂಆರ‍್ಸಿ ಎಂಡಿ ಆಜಯ್ ಸೇಠ್ ಅವರು, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಬೆಂಗಳೂರಿನ ಎಂ.ಜಿರಸ್ತೆ ಬೈಯಪ್ಪನಹಳ್ಳಿ ಮೆಟ್ರೋ ಸಂಚಾರ ಡಿ.22-23 ಸ್ಥಗಿತವಾಗಲಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಘಟನೆಗೆ ಸಂಬಂಧಪಟ್ಟಂತೆ ದೆಹಲಿ ಟೀಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ವಿವರವಾದ ಪ್ರಾಜೆಕ್ಟ್ ರಿಪೋರ್ಟ್ ಸಿದ್ದ ಮಾಡಿಕೊಡುವ ಬಗ್ಗೆ ದೆಹಲಿ ಟೀಮ್ ನಿಂದ ಸಲಹೆ ಪಡೆಯಲಾಗಿದ್ದು, ಮುಂದಿನ ದಿವಸದಿಂದ ನಮ್ಮ ತಂಡ ದೆಹಲಿ ತಂಡದೊಂದಿಗೆ ಸಂಪರ್ಕದಲ್ಲಿ ಇರುತ್ತದೆ.

ಸದ್ಯ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಂಡು ಮೆಟ್ರೋ ರೇಲ್ ಅನ್ನು ರನ್ ಮಾಡಲಾಗುತ್ತಿದೆ ಎಂದು ಹೇಳಿದರು.

Please follow and like us:

Related posts

Leave a Comment