ವಿಷ ಪ್ರಸಾದ ದುರಂತ : ಸಚಿವ ಪುಟ್ಟರಂಗ ಶೆಟ್ಟಿ ನಡೆಗೆ ಖಂಡನೆ

ಚಾಮರಾಜನಗರ : ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಧನ ನೀಡಲು ತಮ್ಮ ಬಳಿಗೆ ಕರೆಸಿಕೊಳ್ಳಲು ಮುಂದಾಗಿರುವ ಸಚಿವ ಪುಟ್ಟರಂಗಶೆಟ್ಟಿ ಅವರ ನಡೆಗೆ ಖಂಡನೆ ವ್ಯಕ್ತವಾಗಿದೆ.

ಇಂದು ಮಧ್ಯಾಹ್ನ 2.30 ಕ್ಕೆ ಹನೂರಿನ ಪ್ರವಾಸಿ ಮಂದಿರದಲ್ಲಿ ಪರಿಹಾರ ಧನ ವಿತರಣಾ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದು, ಪರಿಹಾರ ಪಡೆಯಲು ಮೃತರ ಕುಟುಂಬಸ್ಥರು ಸುಮಾರು 50 ಕಿ.ಮೀ ಪ್ರಯಾಣಿಸಬೇಕಾಗಿದೆ. ಮತ ಕೇಳುವಾಗ ಜನಪ್ರತಿನಿಧಿಗಳು ಮನೆ ಬಾಗಿಲಿಗೆ ಬರುತ್ತಾರೆ. ಆದರೆ, ಪರಿಹಾರ ಪಡೆಯಲು ಸಚಿವರ ಬಳಿ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿಷ ಪ್ರಸಾದ ಸೇವಿಸಿ ಒಂದೇ ಗ್ರಾಮ ಬಿದರಹಳ್ಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹೀಗಿರುವಾಗ ಗ್ರಾಮಕ್ಕೆ ಸಚಿವರು ಬರುವ ಬದಲು ಜನರನ್ನೇ ತಮ್ಮ ಬಳಿ ಕರೆಸಿಕೊಳ್ಳುತ್ತಿದ್ದಾರೆ. ಕುಟುಂಬದವರು ಮೊದಲೇ ಕುಟುಂಬಸ್ಥರನ್ನು ಕಳೆದುಕೊಂಡು ದುಃಖಿತರಾಗಿದ್ದು, ಪರಿಹಾರ ಹಣ ಪಡೆಯಲು 50 ಕಿ.ಮೀ ಪ್ರಯಾಣಿಸಬೇಕಾಗಿದೆ.

Please follow and like us:

Related posts

Leave a Comment