ರಾಯರ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್..!


ರಾಯಚೂರು : ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಚಿತ್ರ ‘ನಟಸಾರ್ವಭೌಮ’ ಬಿಡುಗಡೆ
ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್
ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಜೊತೆ
ಮಠಕ್ಕೆ ಆಗಮಿಸಿದ್ದರು. ಮಠದ ಪೀಠಾಧಿಪತಿ ಸುಬುಧೇಂದ್ರ
ತೀರ್ಥರಿಂದ ಆಶೀರ್ವಾದ ಪಡೆದರು. ಇದೇ ವೇಳೆ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ
ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಈಗ ಫೆಬ್ರವರಿ 7ರಂದು ಸಿನಿಮಾ
ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಯರ ಆಶೀರ್ವಾದ ಪಡೆಯಲು
ಬಂದಿದ್ದೇನೆ ಎಂದು ತಿಳಿಸಿದ್ರು.

ನಟಸಾರ್ವಭೌಮ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ
ಮಾಡಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ
ಪುನೀತ್ ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಡಿಂಪಲ್ ಬೆಡಗಿ
ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟಿಸಿದ್ದಾರೆ.

Please follow and like us:

Related posts

Leave a Comment