ಮುಸ್ಲೀಮರ ಮಾಹಿತಿ ಕೋಡ್ತೀವಿ..

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲಿಕ್ ಮರ್ಕಜ್‌ನಲ್ಲಿ ಪಾಲ್ಗೊಂಡ ಎಲ್ಲಾ ಮುಸ್ಲೀಮರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ತಾವು ಸಿದ್ದ ಅಂತ ರಾಜ್ಯ ಮುಸ್ಲಿಂ ಸಮಾಜದ ಮುಖಂಡರು ತಿಳಿಸಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಪ್ರಮುಖ ಮುಸ್ಲಿಂ ನಾಯಕರುಗಳ ಜೊತೆಗೆ ಸಭೆ ನಡೆಸಿದ್ರು..ಈ ವೇಳೆ ಸಭೆಯಲ್ಲಿ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಬಳಿಕ ಮುಸ್ಲಿಂ ನಾಯಕರು, ನಿಜಾಮುದ್ದೀನ್ ತಬ್ಲೀಘ್ ಮರ್ಕಜ್‌ಗೆ ಭೇಟಿ ನೀಡಿದ ರಾಜ್ಯದ ವ್ಯಕ್ತಿಗಳ ಮಾಹಿತಿ ನೀಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ.ಅಲ್ಲದೆ, ಆರೋಗ್ಯ ಕಾರ್ಯಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ, ವೈದ್ಯಕೀಯ ಪರೀಕ್ಷೆಗೆ ಒಳಗಾಗಿ ಕ್ವಾರಂಟೈನ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿಯೂ ಅವರು ಒಪ್ಪಿಗೆ ಸೂಚಿಸಿದ್ದಾರೆ.

Please follow and like us:

Related posts

Leave a Comment