ಕನ್ನಡ ನಟಿ ಶರ್ಮಿಳಾ ಮಾಂಡ್ರೆ ಕಾರು ಪಿಲ್ಲರ್‌ಗೆ ಡಿಕ್ಕಿ..

ಬೆಂಗಳೂರು: ಸಾಮಾನ್ಯ ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ದಾರೆ.
ಮನೆಯಲ್ಲಿರದೇ ನಿನ್ನೆ ರಾತ್ರಿ ಜಾಲಿ ರೈಡ್ ಹೋಗಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೀಡಾಗಿದ್ದು,ನಟಿಯ ಮುಖಕ್ಕೂ ಗಾಯಗಳಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ರಾತ್ರಿ ಜ್ವಾಗಾರ್ ಕಾರಿನಲ್ಲಿ ಶರ್ಮಿಳಾ ಮಾಂಡ್ರೆ ಹಾಗೂ ಅವರ ಸ್ನೇಹಿತರು ಜಾಲಿ ರೈಡ್ ಮಾಡುವಾಗ ಬೆಂಗಳೂರಿನ ವಸಂತನಗರದ ಬಳಿ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಕಾರಿನಲ್ಲಿದ್ದ ಶರ್ಮಿಳಾ ಮಾಂಡ್ರೆ ಹಾಗೂ ಸ್ನೇಹಿತನಿಗೂ ಗಾಯವಾಗಿದೆ ಅಂತ ತಿಳಿದು ಬಂದಿದೆ.
ಇನ್ನು ಅಪಘಾತವಾದಾಗ ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು? ಮದ್ಯ ಸೇವನೆ ಮಾಡಿ ಕಾರ್ ಡ್ರೈವಿಂಗ್ ಮಾಡಿದ್ದರಾ? ಎಂಬುದರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Please follow and like us:

Related posts

Leave a Comment