ಎಣ್ಣೆ ಬೇಕು ಅಂತ ಪ್ರತಿದಿನ 2 ಸಾವಿರ ಫೋನ್ ಕರೆ..

ಕೋಲಾರ: ಕೊರೋನಾ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಮದ್ಯ ಸಿಗುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು,ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಇನ್ನು ಕೋಲಾರದಲ್ಲಿ ಕೊರೋನಾ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮದ್ಯದ ಅಂಗಡಿಗಳು ತೆರೆಯುವಂತೆ ಇಲಾಖೆಗೆ ಪ್ರತಿದಿನ ಎರಡು ಸಾವಿರ ಕರೆಗಳು ಬರುತ್ತಿವೆ. ಆದ್ರೆ ಸಿಎಂ ನಿರ್ಧಾರಕ್ಕೆ ಬದ್ದರಾಗಿದ್ದು ಲಕ್ ಡೌನ್ ಮುಗಿಯುವವರೆಗೂ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ.ಜೊತೆಗೆ ರಾಜ್ಯದಲ್ಲಿ ಮದ್ಯ ಸಿಗದೇ ಜನರು ಸಾವನ್ನಪ್ಪಿದ್ದಾರೆ ಎಂಬದು ನಾನು ನಂಬುವುದಿಲ್ಲ ಬೇರೆ ಯಾವುದೂ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕೋಲಾರ

Please follow and like us:

Related posts

Leave a Comment