ಹುಬ್ಬಳ್ಳಿ: ಕೈ ಮೇಲೆ ಕ್ವಾರಂಟೈನ್‌ಸೀಲ್ ಇದ್ರೂ ರಾಜಾರೋಷವಾಗಿ ಓಡಾಡುವ ಮೂಲಕ ವ್ಯಕ್ತಿಯೊಬ್ಬ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಕುಂದಗೋಳ ತಾಲೂಕಿನಸಂಶಿ ಮೂಲದ ಹಜರತ್ ಅಲಿ ಜೋಡ್ಮನಿ ಎಂಬಾತನೇ ಬೇಕಾ ಬಿಟ್ಟಿ ಓಡಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾನೆ.
ಕಳೆದ ೧೦ ದಿನಗಳ ಹಿಂದೆ ಗೋವಾ ರಾಜ್ಯಕ್ಕೆ ಪ್ರವಾಸ ಬೆಳೆಸಿದ್ದ.ನಂತ್ರ ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ್ದ.ಹೀಗಾಗಿ ಬೆಳಗಾವಿ ಗಡಿಯಲ್ಲಿ ಈತನಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ವಾರೈಂಟೈನ್ ಸೀಲ್ ಹಾಕಿದ್ದಾರೆ. ಆದರೆ ಕೈ ಮೇಲೆ ಸೀಲ್ ಇದ್ದರೂ ಮನೆಯಲ್ಲಿ ಇರದ ಜೋಡ್ಮನಿ ಔಷಧಿ ಖರೀದಿಗೆಂದು ಚನ್ನಮ್ಮ ವೃತ್ತದಲ್ಲಿ ಪ್ರತ್ಯಕ್ಷವಾಗಿದ್ದಾನೆ.
ಇನ್ನು ಮೆಡಿಕಲ್ ಸ್ಟೋರ್ ಕೆಲಸಗಾರನ ಮಾಹಿತಿಯ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ಕೈ ಮೇಲೆ ಸೀಲ್ ಇರೋದು ಧೃಢಪಡಿಸಿಕೊಂಡಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದಆರೋಗ್ಯ ಇಲಾಖೆ ಅಧಿಕಾರಿಗಳು ಶಂಕಿತನನ್ನು ತಪಾಸಣೆಗೆ ಒಳಪಡಿಸಿದ್ದು, ಹೆಚ್ಚಿನ ತಪಾಸಣೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಕೈ ಮೇಲೆ ಸೀಲ್ ಇದ್ರೂ ಬೇಕಾ ಬಿಟ್ಟಿ ಓಡಾಟ..

Please follow and like us: