ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮುಕ್ತಾಯವಾಗಲಿದೆಯಾ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಅಂದ ಹಾಗೇ ಈ ಸಂಬ0ಧ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್,ಕೋವಿಡ್-೧೯ರ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್ ಅವಧಿಯೂ ಇದೇ ೧೪ರಂದು ಮುಕ್ತಾಯಗೊಳ್ಳಲಿದೆ ಅಂತ ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ,ಇದಾದ ನಂತರ ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು,ಪ್ರಧಾನ ಕಾರ್ಯದರ್ಶಿಗಳು,ಕಾರ್ಯದರ್ಶಿಗಳು ತಮ್ಮ ಅಧೀನದಲ್ಲಿರುವ ಇಲಾಖೆಗಳಲ್ಲಿ ತೆಗೆದುಕೊಳ್ಳಬೇಕಾಗಿರುವ ಪ್ರಮುಖ ೧೦ ಕ್ರಮಗಳ ಬಗ್ಗೆ ಇದೇ ೯ರೊಳಗೆ ಕಳುಹಿಸಬೇಕೆಂದು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ 14 ರಂದೇ ಲಾಕ್‌ಡೌನ್ ಮುಕ್ತಾಯ..

Please follow and like us: