ಮುದಗಲ್‌ನಲ್ಲಿ ರಸ್ತೆಗಿಳಿದಿದ್ದ 40 ಬೈಕ್‌ಗಳ ವಶ

ಲಿಂಗಸೂಗೂರು : ಕೋವಿಡ್-೧೯ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ. ಆದರೆ ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಬೈಕ್ ಸವಾರರು ಬೀದಿ ಬೀದಿ ಸುತ್ತುತ್ತಿದ್ದಾರೆ.
ಹೌದು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹಲವೆಡೆ ಸಾರ್ವಜನಿಕರು ಅನಗತ್ಯವಾಗಿ ಕಾರಣವಿಲ್ಲದೇ ಬೈಕ್‌ಗಳಲ್ಲಿ ಸುತ್ತಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿAದ ಇದುವರೆಗೂ ಸ್ಥಳೀಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ,ಪಟ್ಟಣದ ವಿವಿಧ ಗಲ್ಲಿಗಳಲ್ಲಿ ರಸ್ತೆಯ ಮೇಲೆ ಗುಂಪು ಗುಂಪಾಗಿ ಓಡಾಡುವ ಜನರಿಗೆ ಲಾಠಿ ರುಚಿ ತೋರಿಸಿದ್ದಾರೆ.
ಇದೇ ವೇಳೆ ಮನೆಯಿಂದ ಹೊರಗೆ ಬರದಂತೆ ವಿನಂತಿಸುತ್ತಿದ್ದಾರೆ. ವಿನಾಕಾರಣ ಬೈಕ್‌ಗಳಲ್ಲಿ ತೆರಳುತ್ತಿದ್ದವರನ್ನ ನಿಲ್ಲಿಸಿ, ಸುಮಾರು ೪೦ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಸುತ್ತಾಡುತ್ತಿದ್ದ ಬೈಕ್ ಸವಾರರಿಗೆ ಮುದಗಲ್ ಠಾಣೆಯ ಪಿ.ಎಸ್.ಐ ಡಾಕೇಶ್ ಉಪ್ಪಾರ್ ಎಚ್ಚರಿಕೆ ನೀಡಿದ್ದಾರೆ.

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು(ರಾಯಚೂರು)

Please follow and like us:

Related posts

Leave a Comment