ರಾಜ್ಯದಲ್ಲಿ ಲಾಕ್‌ಡೌನ್ ಓಪನ್?

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಓಪನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸದ್ಯ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದ್ದು,ಈ ಬಗ್ಗೆ ಸ್ವತಃ ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ಅಂದ ಹಾಗೇ ಕೊರೊನಾ ಕಾಣಿಸಿಕೊಳ್ಳದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಾಕಡೌನ್ ಓಪನ್ ಮಾಡಲು ಸರ್ಕಾರ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಇಲ್ಲದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸುವ ಯೋಜನೆ ಇದ್ದು, ಎಲ್ಲೆಲ್ಲಿ ಕರೋನಾ ಕಾಣಿಸಿಕೊಂಡಿಲ್ಲ ಆಯಾ ಜಿಲ್ಲೆಗಳಲ್ಲಿ ಸಡಿಲಿಕೆ ಮಾಡುವ ವಿಚಾರ ಸರ್ಕಾರದ ಮುಂದಿದೆ.ಆದರೆ ಅಂತಿಮ ನಿರ್ಣಯ ಆಗಿಲ್ಲ ಎಂದು ಡಿಸಿಎಂ ಕಾರಜೋಳ ತಿಳಿಸಿದ್ದಾರೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment