ಆರೋಗ್ಯ / HEALTH

ಲಾಕ್‌ಡೌನ್..ಲಾಕ್‌ಡೌನ್..ಕಂಪ್ಲೀಟ್ ಲಾಕ್‌ಡೌನ್..

Published

on

ಬೆಂಗಳೂರು:ಏಪ್ರಿಲ್ ೩೦ರ ತನಕ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಲಾಕ್‌ಡೌನ್ ಸಡಿಲ ಆಗಬಾರದು. ಏ.೧೪ರ ನಂತರದ ೧೫ ದಿನ ಲಾಕ್‌ಡೌನ್ ಅನಿವಾರ್ಯ ಎಂದು ಪ್ರಧಾನಿ ಮೋದಿ ಇಂಗಿತ ವ್ಯಕ್ತಪಡಿಸಿದ್ದಾಗಿ ತಿಳಿಸಿದರು. ಮುಂದಿನ ದಿನಗಳ ಲಾಕ್‌ಡೌನ್ ವಿಭಿನ್ನವಾಗಿರಲಿದೆ. ಇನ್ನು ಎರಡ್ಮೂರು ದಿನದಲ್ಲಿ ಲಾಕ್‌ಡೌನ್ ಮಾರ್ಗ ಸೂಚಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಆರ್ಥಿಕ ಚಟುವಟಿಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಲಾಕ್ ಡೌನ್ ಇರಬೇಕೆಂದು ಪ್ರಧಾನಿ ತಿಳಿಸಿದ್ದಾರೆ. ಇನ್ನೆರಡು ದಿನದಲ್ಲಿ ಕೇಂದ್ರ ಸರ್ಕಾರವೇ ಮಾರ್ಗಸೂಚಿ ನೀಡಲಿದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ಧಾರೆ.
ಇದೇ ವೇಳೆ ವಿವಿಧ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸುಮಾರು ೪ ಗಂಟೆ ಕಾಲ ವಿಡಿಯೋ ಕಾನ್ಫೆರೆನ್ಸ್ನಲ್ಲಿ ಮಾತನಾಡಿದರು. ಅಲ್ಲದೆ,ಕರ್ನಾಟಕದಲ್ಲಿ ಕೈಗೊಳ್ಳಲಾಗಿರುವ ಕಟ್ಟುನಿಟ್ಟಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಧಾನಿ ಸಮಾಧಾನ ಪಟ್ಟು ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರೆನ್ನಲಾಗಿದೆ.
ಇನ್ನು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ವಿಸ್ತರಣೆಯಾಗಬೇಕೆಂದು ಪ್ರಧಾನಿಗೆ ಸಲಹೆ ನೀಡಿದ್ದರು. iÀÄಡಿಯೂರಪ್ಪ ಕೂಡ ಇದೇ ವಿಚಾರವನ್ನು ಪ್ರಸ್ತಾಪಿಸಿ ಲಾಕ್ ಡೌನ್ ಮುಂದುವರಿಸುವAತೆ ಮನವಿ ಮಾಡಿದ್ದರು. ಪ್ರಧಾನಿ ಮೋದಿ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ. ಬಹುತೇಕ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version