ದೇಶ - ವಿದೇಶ

ಲಾಕ್‌ಡೌನ್ ಮುಗಿಯೋವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ..

Published

on

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮುಗಿದ ನಂತರವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸದ್ಯ ಏ.೧೪ರ ನಂತರ ಇನ್ನು ೧೫ ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಅನಿವಾರ್ಯ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಲಾಕ್‌ಡೌನ್ ಮುಗಿಯುವವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ ಎಂದು ತಿಳಿದು ಬಂದಿದೆ.
ಇನ್ನೂ ಲಾಕ್‌ಡೌನ್ ಮುಗಿದ ೧೦ ದಿನಗಳ ಬಳಿಕ ೧೦ನೇ ಕ್ಲಾಸ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಇದಲ್ಲದೆ,ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ನಡೆಸುವ ಬಗ್ಗೆಯೂ ಗಂಭೀರ ಚರ್ಚೆ ನಡೆದಿದ್ದು,ಲಾಕ್‌ಡೌನ್ ಮುಗಿದ ಬಳಿಕ ಶಿಕ್ಷಣ ಇಲಾಖೆಯಿಂದ ಪರೀಕ್ಷೆ ನಡೆಯುವ ಬಗ್ಗೆ ನೋಟಿಫಿಕೇಷನ್ ಹೊರಡಿಸಲಾಗುತ್ತದೆ.ಆ ನಂತರ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version