ಕರ್ನಾಟಕದಲ್ಲಿ ಆನೆಗೂ ಕೊರೊನಾ ವೈರಸ್ ಭೀತಿ

ಗದಗ : ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೇವು.ಈಗ ಕಣ್ಣಿಗೇ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಅದರ ಭೀತಿ ಹುಟ್ಟಿಸಿದೆ. ಇದರ ಪರಿಣಾಮವಾಗಿ ಗದಗ ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠದ ಆನೆ ಹಾಗೂ ಲಕ್ಷ್ಮೇಶ್ವರ ಸಮೀಪದ ಮುಕ್ತಿ ಮಂದಿರದ ಆನೆಗಳನ್ನು ಸಹ ಐಸೊಲೇಷನ್‌ನಲ್ಲಿ ಇಡಲಾಗಿದೆ.
ಸದ್ಯ ಪ್ರತಿದಿನ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯರು ಬಂದು ಎರಡೂ ಆನೆಗಳ ಆರೋಗ್ಯವನ್ನು ಪರೀಕ್ಷೆ ಮಾಡುತ್ತಿದ್ದಾರೆ.
ಈ ಮೊದಲು ೨ ಆನೆಗಳನ್ನು ಪ್ರತಿದಿನ ನಾಲ್ಕಾರು ಕಿಲೋಮೀಟರ್ ವಾಕಿಂಗ್ ಹಾಗೂ ಆಹಾರಕ್ಕಾಗಿ ಕರೆದುಕೊಂಡು ಹೋಗಲಾಗುತಿತ್ತು. ಆದರೆ ಸರ್ಕಾರದ ಲಾಕ್‌ಡೌನ್ ಆದೇಶದ ನಂತರ ಎರಡು ಆನೆಗಳನ್ನು ಮಠದಲ್ಲೇ ಆರೈಕೆ ಮಾಡಲಾಗುತ್ತಿದೆ.
ಇನ್ನು ಅರಣ್ಯ ಇಲಾಖೆಯವರು ಎರಡು ಆನೆಗಳ ಆರೋಗ್ಯದ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಪ್ರತಿದಿನ ಮಠಗಳಿಗೆ ಭೇಟಿ ನೀಡಿ ಎರಡು ಆನೆಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ.
ಅಷ್ಟೇ ಅಲ್ಲದೇ ಆನೆಗಳನ್ನು ನೋಡಿಕೊಳ್ಳುತ್ತಿರುವ ಮಾವುತರಿಗೆ ಮಾಸ್ಕ್ ಧರಿಸಿಯೇ ಆನೆಗಳ ಆರೈಕೆ ಮಾಡಬೇಕು ಹಾಗೂ ಹೊರಗಿನ ಯಾವುದೇ ವ್ಯಕ್ತಿಗಳನ್ನು ಭೇಟಿ ಮಾಡದಂತೆ ಸೂಚನೆ ನೀಡಿದ್ದಾರೆ. ಸಧ್ಯ ಆನೆಗಳೆರಡ ಆರೋಗ್ಯವೂ ಚೆನ್ನಾಗಿದೆ.
ಈ ಹಿಂದೆ ನ್ಯೂಯಾರ್ಕ್ನಲ್ಲಿನ ಬ್ರಾನ್ಸ್ ಮೃಗಾಲಯದಲ್ಲಿನ ಹುಲಿಗೆ ಕೊರೊನಾ ವೈರಸ್ ತಗುಲಿರುವುದು ವರದಿಯಾಗಿತ್ತು.ಅದಾದ ಬಳಿಕ ಇದೀಗ ಕರ್ನಾಟಕದಲ್ಲಿ ರಹಟ್ಟಿಯ ಫಕೀರೇಶ್ವರ ಮಠದ ಆನೆಗೆ ಕೊರೊನಾ ವೈರಸ್ ಭೀತಿ ಎದುರಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಗದಗ

Please follow and like us:

Related posts

Leave a Comment