ಅಂಗನವಾಡಿ ಕಾರ್ಯಕರ್ತೆ ಮೇಲೆ ಯುವಕರಿಂದ ಹಲ್ಲೆ..

ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಿದರಳ್ಳಿ ತಾಂಡಾದಲ್ಲಿ ನಡೆದಿದೆ.
ಶಶಿಕಲಾ ಬಾಯಿ ಹಲ್ಲೆಗೊಳಗಾದ ಅಂಗನವಾಡಿ ಕಾರ್ಯಕರ್ತೆ. ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ತೆರಳಿದ್ದ ವೇಳೆ ಗ್ರಾಮಕ್ಕೆ ಬೆಂಗಳೂರಿನಿAದ ಬಂದಿದ್ದ ೮ ಜನ ಯುವಕರು ಲಾಕ್ ಡೌನ್ ಇದ್ದರೂ ಅನಾವಶ್ಯಕವಾಗಿ ಓಡಾಡುತ್ತಿದ್ರು.
ಈ ವೇಳೆ ಶಶಿಕಲಾ ಯುವಕರಿಗೆ ಬುದ್ದಿವಾದ ಹೇಳಿದ್ದರು.ಮನೆಯಲ್ಲಿ ಇರುವಂತೆ ಮನವಿ ಮಾಡಿದ್ದರು. ಇದರಿಂದ ಕುಪಿತಗೊಂಡ ಯುವಕರು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಸದ್ಯ ಗಾಯಗೊಂಡ ಇವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ತೆರಳಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ, ಕಾರ್ಯಕರ್ತೆಯನ್ನು ಭೇಟಿ ಮಾಡಿ ನಿಮ್ಮ ಜೊತೆ ಸರ್ಕಾರ ಇದೆ, ಹೆದರಬೇಡಿ ಎಂದು ಸಾಂತ್ವನ ಹೇಳಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ

Please follow and like us:

Related posts

Leave a Comment