ಲಾಕ್‌ಡೌನ್ ಕಟ್ಟುನಿಟ್ಟಿಗೆ ಸಂಚಾರಿ ದಳ

ತುಮಕೂರು: ಕೋವಿಡ್-೧೯ ನಿಯಂತ್ರಣಕ್ಕೆ ಸೋಮವಾರ ಕಳುಹಿಸಿದ್ದ ಮಾದರಿಗಳು ನೆಗೆಟಿವ್ ಬಂದಿವೆ.
ಮೇ.೩ರ ವರೆಗೆ ವಿಸ್ತರಿಸಲಾಗಿರುವ ಲಾಕ್‌ಡೌನ್‌ನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್‌ಕುಮಾರ್ ಕೋರಿದ್ದಾರೆ.
ಶಿರಾ ತಾಲ್ಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ಕಂಡುಬAದಿರುವ ಪ್ರದೇಶಗಳಲ್ಲಿರುವ ಜನರಿಗೆ ಜ್ವರ, ಕೆಮ್ಮು, ನೆಗಡಿ, ಶೀತ ಲಕ್ಷಣಗಳಿದ್ದರೆ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದರು.
ಸಾರ್ವಜನಿಕರು ಲಾಕ್‌ಡೌನ್ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ದೂರುಗಳು ಬರುತ್ತಿವೆ.ಇದಕ್ಕಾಗಿ ಎಲ್ಲ ತಾಲ್ಲೂಕುಗಳಲ್ಲಿ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಆರು ತಂಡಗಳ ಸಂಚಾರಿ ದಳ ರಚನೆ ಮಾಡಲಾಗಿದೆ. ಇವರು ಲಾಕ್‌ಡೌನ್ ಉಲ್ಲಂಘನೆ ಕಂಡು ಬಂದಲ್ಲಿ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡುವರು. ಜನರ ವರ್ತನೆ ಮಿತಿ ಮೀರಿದರೆ ಪ್ರಕರಣ ದಾಖಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಕಾರ್ಯಪಡೆಗಳು ಇನ್ನಷ್ಟು ಕಾರ್ಯಪ್ರವೃತ್ತವಾಗಲು ಸೂಚಿಸಲಾಗಿದೆ. ಹೊರ ರಾಜ್ಯ ಅಥವಾ ಸೋಂಕಿನ ಸೂಕ್ಷ್ಮ ಜಿಲ್ಲೆ, ತಾಲ್ಲೂಕುಗಳ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಇದ್ದರೂ ಲಾಕ್‌ಡೌನ್ ಉಲ್ಲಂಘಿಸಿ ಸಣ್ಣ ಪುಟ್ಟ ರಸ್ತೆಗಳ ಮುಖಾಂತರ ಜನರು ಗ್ರಾಮಗಳಿಗೆ ಬರುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ.ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳ ಮೇಲೆ ನಿಗಾವಹಿಸಿ ಅಂತಹವರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಬೇಕು ಎಂದು ಗ್ರಾಮೀಣ ಕಾರ್ಯಪಡೆಗೆ ಸೂಚಿಸಲಾಗಿದೆ.ಅಂತಹವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಿ, ಅವರ ವೈದ್ಯಕೀಯ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು.
ಅAದ ಹಾಗೇ ಕಳೆದ ೧೪ ದಿನಗಳಿಂದ ಸೋಂಕಿನ ಪ್ರಕರಣಗಳು ದಾಖಲು ಆಗಿಲ್ಲ. ಇಲ್ಲಿ ಕೈಗೊಂಡಿರುವ ಕ್ರಮಗಳಿಂದ ಪರಿಸ್ಥಿತಿ ಹತೋಟಿಯಲ್ಲಿ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್ ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶ್ಲಾಘಿಸಿದ್ದಾರೆ

ಶ್ರೀಮಂತ್ ಕುಮಾರ್ ಎಕ್ಸ್ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment