ಆರೋಗ್ಯ / HEALTH

ನಾಗಲಮಂಗಲದಲ್ಲಿ ವಲಸೆ ಕಾರ್ಮಿಕರ ಬಗ್ಗೆ ತೀವ್ರ ನಿಗಾ..

Published

on

ನಾಗಮಂಗಲ: ವಿಶ್ವವ್ಯಾಪಿ ಕರೋನಾ ವೈರಸ್ ಭೀತಿ ಹೆಚ್ಚುತ್ತಿದ್ದು, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲೂ ಕರೋನಾ ಛಾಯೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ನಾಗಮಂಗಲ ತಾಲ್ಲೂಕು ಟಾಸ್ಕ್ ಫೋರ್ಸ್ ಸಮಿತಿ ವಲಸೆ ಕಾರ್ಮಿಕರ ಬಗ್ಗೆ ತೀವ್ರ ನಿಗಾ ವಹಿಸುತ್ತಿದೆ.
ಪಶ್ಚಿಮ ಬಂಗಾಳ, ಕಲ್ಕತ್ತ, ಹಾಗೂ ರಾಜಸ್ಥಾನ ಸೇರಿದಂತೆ ಹೊರರಾಜ್ಯಗಳ ವಲಸೆ ಕಾರ್ಮಿಕರು ತಾಲ್ಲೂಕಿನಾಧ್ಯಂತ ಇರುವುದನ್ನ ಮನಗಂಡ ತಾಲ್ಲೂಕು ಆಡಳಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿತು.
ಪಟ್ಟಣದ ಹೊರವಲಯ ಚೌಡೇನಹಳ್ಳಿ ಸಮೀಪದ ಹೆದ್ದಾರಿ ಪಕ್ಕದ ತೋಟದಲ್ಲಿ ವಾಸವಿದ್ದ ಸುಮಾರು ೩೧ವಲಸೆ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು.ಸ್ಕ್ರೀನಿಂಗ್ ಪರೀಕ್ಷೆ ಮಾಡುವ ಮೂಲಕ ಈ ಪೈಕಿ ಇಬ್ಬರನ್ನು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಯಿತು. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಲು ಗುತ್ತಿಗೆದಾರನಿಗೆ ದೂರವಾಣಿ ಮೂಲಕ ಸೂಚನೆ ನೀಡಲಾಯಿತು.
ಇನ್ನು ಇದರ ಬಗ್ಗೆ ಮಾತನಾಡಿದ ತಹಸೀಲ್ದಾರ್ ಕುಂಞ ಅಹಮ್ನದ್,ತಾಲ್ಲೂಕಿನಾಧ್ಯಂತ ೪೦೦ಕ್ಕೂ ಹೆಚ್ಚು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳ ವಲಸೆ ಕಾರ್ಮಿಕರಿದ್ದು,ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ನಿಗಾ ವಹಿಸಲಾಗಿದೆ. ಪ್ರತಿದಿನ ಆರೋಗ್ಯ ತಪಾಸಣೆ ನೆಡೆಸಲಾಗುತ್ತಿದೆ. ಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭ ಕಾರ್ಮಿಕ ಇಲಾಖೆಯ ನಿರೀಕ್ಷಕ ಮಹೇಶ್, ಪುರಸಭಾ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ಪರಿವೀಕ್ಷಕ ಶಿವಮೂರ್ತಿ ಹಾಗೂ ರಾಜಸ್ವ ನಿರೀಕ್ಷಕ ಸತ್ಯನಾರಾಯಣ ಇದ್ದರು.

ಎಸ್.ವೆಂಕಟೇಶ್ ಎಕ್ಸ್ ಪ್ರೆಸ್ ಟಿವಿ ನಾಗಮಂಗಲ (ಮಂಡ್ಯ)

Click to comment

Trending

Exit mobile version