Connect with us

ಆರೋಗ್ಯ / HEALTH

ಸಿಎಂ `ಕೈ’ಗೆ ಟಾಸ್ಕ್ ಫೋರ್ಸ್ ವರದಿ..

Published

on

ಬೆಂಗಳೂರು : ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು.
ಅಂದ ಹಾಗೇ ಈ ಮಾತುಕತೆ ವೇಳೆ ರಾಜ್ಯ ಸರ್ಕಾರಕ್ಕೆ ಐದು ಪುಟಗಳಲ್ಲಿ ೧೫ ಬೇಡಿಕೆಗಳನ್ನು ಕಾಂಗ್ರೆಸ್ ನಿಯೋಗ ಸಲ್ಲಿಸಿದೆ.
ಈ ವೇಳೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆರ್ ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಹಾಜರಿದ್ದರು.
ಇನ್ನು ಲಾಕ್ ಡೌನ್ ವೇಳೆ ಪರಿಹಾರ ಸಾಮಗ್ರಿಗಳ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಾರತಮ್ಯ ಧೋರಣೆ ಅನುಸರಿಸುತ್ತಿರುವ ಬಗ್ಗೆ ಗಮನ ಸೆಳೆಯಿತು.
ನಂತರ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಿದ್ದಪಡಿಸಿದ್ದ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಿ ರಾಜ್ಯದ ವಸ್ತುಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯಿತು.
ಕಾಂಗ್ರೆಸ್ ಟಾಸ್ಕ್ ಫೋರ್ಸ್ ವರದಿಯಲ್ಲಿ ಏನಿದೆ?
೧) ಮನುಕುಲದ ಹೆಮ್ಮಾರಿಯಾದ ಕೊರೋನಾ ರೋಗ ರಾಷ್ಟ್ರವ್ಯಾಪ್ತಿಯಲ್ಲದೇ ವಿಶ್ವವ್ಯಾಪಿಯಾಗಿ ಹರಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲು ಮತ್ತು ಕೊರೋನಾ ರೋಗ ನಿವಾರಣೆ ಹಾಗೂ ಲಾಕ್ಡೌಷನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು.

೨) ಕೊರೋನಾ ರೋಗ ಹರಡುವಿಕೆಯನ್ನು ತಡೆಯಲು ವಿಶ್ವ ಆರೋಗ್ಯ ಸಂಘಟನೆ ಮಾರ್ಗಸೂಚಿಯಂತೆ ಪ್ರತಿ ೧೦ ಲಕ್ಷ ಜನರ ಪೈಕಿ ೧೦,೦೦೦ ಜನರಿಗೆ ಕೊರೋನಾ ರೋಗದ ಪರೀಕ್ಷೆಯನ್ನು ನಡೆಸಲು ಪ್ರತಿ ಜಿಲ್ಲೆಯಲ್ಲಿ ಕೂಡಲೇ ಸುಸಜ್ಜಿತವಾದ ಲ್ಯಾಬ್ ತೆರೆದು, ಅದರಲ್ಲಿ ಉತ್ತಮ ಗುಣಮಟ್ಟದ ರ್ಯಾಪಿಡ್ ಟೆಸ್ಟ್ ಕಿಟ್‌ಗಳು, ಪಿ.ಪಿ.ಇ ಕಿಟ್‌ಗಳು, ಗ್ಲೌಸ್ಗ್ಳು, ಸ್ಯಾನಿಟೈಜರ್ಸ್, ಔಷಧಿಗಳು ಹಾಗೂ ಸಾಕಷ್ಟು ಪ್ರಮಾಣದ ವೈದ್ಯರು, ದಾದಿಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ಒದಗಿಸುವುದು.

೩)ಪ್ರಾಣವನ್ನೇ ಪಣವಾಗಿಟ್ಟು ಕೊರೋನಾ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರಿಗೆ ಸರಕಾರವೇ ನಿಮಾ ಸೌಲಭ್ಯ ನೀಡಿರುವುದು ಶ್ಲಾಘನೀಯ. ವೈದ್ಯರಷ್ಟೇ ತ್ಯಾಗ ಮನೋಭಾವದಿಂದ ದುತ್ತಿಯುತ್ತಿರುವ ಪ್ಯಾರಾ ಮೆಡಿಕಲ್, ಸಿಬ್ಬಂದಿ ದಾದಿಯರು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತರು ಮುಂತಾದ ಸಿಬ್ಬಂದಿ ವರ್ಗಕ್ಕೂ ಈ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಪೂರ್ವಕವಾಗಿ ಕೋರುತ್ತೇನೆ.ಸರ್ಕಾರವು ತಕ್ಷಣವೇ ಅವರ ಬಾಕಿ ಸಂಬAಳವನ್ನು ಪಾವತಿಸುವುದು ಮಾತ್ರವಲ್ಲ, ಅವರಿಗೆ ಕನಿಷ್ಠ ಒಂದು ತಿಂಗಳ ವಿಶೇಷ ಭತ್ಯೆಯನ್ನು ನೀಡಬೇಕು..

೪)ಕೊರೋನೇತರ ರೋಗಗಳಿಗೆ ಯಾವುದೇ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗ್ಳು ವೈದ್ಯೋಪಚಾರ ದೊರೆಯದೇ ರೋಗಿಗಳು ತೀವ್ರ ತರದ ಕಷ್ಟಕ್ಕೆ ಗುರಿಯಾಗಿದ್ದಾರೆ. ಇದನ್ನು ನಿವಾರಿಸುವ ದೃಷ್ಟಿಯಿಂದ ಕೂಡಲೇ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗರಳನ್ನು ತೆರೆದು ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ನೀಡಲು ಸರ್ಕಾರ ಕ್ರಮ ಜರುಗಿಸುವುದು. ಅವರುಗಳಿಗೂ ಕೊರೋನಾ ನಿರೇಧಕ ಸೌಲಭ್ಯಗಳನ್ನು ಸರ್ಕಾರ ಒಗಿಸುವುದು.ಅವರುಗಳಿಗೂ ಕೊರೋನಾ ನಿರೋಧಕ ಸೌಲಭ್ಯಗಳನ್ನು ಸರ್ಕಾರ ಒದಗಿಸುವುದು.

೫)ಕೊರೋನಾ ರೋಗ ಹರಡಿರುವ ರೆಡ್ ಜೋನ್ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡುವುದು ಹಾಗೂ ಎಲ್ಲಾ ಪ್ರದೇಶಗಳಲ್ಲಿ ಜನರು ದೈಹಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸುವುದು.

೬) ರೈತರ ಸಂಕಷ್ಟಗಳ ಬಗ್ಗೆ ಎಲ್ಲ ಮಾಹಿತಿಗಳು ನಮ್ಮ ಬಳಿ ಲಭ್ಯವಿದೆ. ಅವರ ಬಗ್ಗೆ ಪ್ರತ್ಯಕ್ಷವಾಗಿ ಮಾಹಿತಿ ಪಡೆಯಲು ನಾನು ಖುದ್ದಾಗಿ ನಮ್ಮ ಪಕ್ಷದ ಶಾಸಕರು, ಸಂಸದರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತಿತರ ಹಿರಿಯ ಮುಖಂಡರ ಜೊತೆಯಲ್ಲಿ ರಾಜ್ಯದ ಅನೇಕ ಕಡೆ ಪ್ರವಾಸ ಮಾಡಿರೈತರ ಸಮಸ್ಯೆಗಳನ್ನು ಆಲಿಸಿದ್ದೇನೆ ಮತ್ತು ನೋಡಿದ್ದೇನೆ.ಅಲ್ಲದೆ ಪಂಚಾಯ್ತಿ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದ ಕಾರ್ಯಕರ್ತರು ಈ ಬಗ್ಗೆ ಸತತವಾಗಿ ಮಾಹಿತಿ ನೀಡುತ್ತಿದ್ದಾರೆ. ಅದರ ಜೊತೆಗೆ ಶಾಸಕ ರಮೇಶ ಕುಮಾರ್‌ರ ನೇತೃತ್ವದಲ್ಲಿ ನಾವು ಒಂದು ಟಾಸ್ಕ್ ಫೋರ್ಸ್ ರಚಿಸಿದ್ದು, ಅದರ ಮೂಲಕ ಜನರ ಕಷ್ಟ-ನಷ್ಟಗಳಮಾಹಿತಿ ಸಂಗ್ರಹ ಮಾಡಿ,ಅರ್ಹರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದೇವೆ. ಮಾಧ್ಯಮಗಳು ಸಹ ಕೈತರ ಸಮಸ್ಯೆಗಳ ಬಗ್ಗೆ ಸತತವಾಗಿ ಮಾಹಿತಿ ನೀಡುವಂತಹ ಉತ್ತಮ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತಿವೆ.
ವಿಶೇಷವಾಗಿ ತರಕಾರಿ, ಹೂ, ಹಣ್ಣು, ರೇಷ್ಮೆ- ಮುಂತಾದ ಬೆಳೆಗಳನ್ನು ಬೆಳೆಯುವ ರೈತರು ಹಾಗೂ ಹೈನುಗಾರಿಕೆಕೆಯಲ್ಲಿ ತೊಡಗಿರುವವರು ಸಾಗಾಣಿಕೆ ಮಾಡಲು ಸಾಧ್ಯಗದೆ ಮತ್ತು ಮಾರುಕಟ್ಟೆ ಮುಚ್ಚಿರುವ ಕಾರಣದಿಂದ ಅಪಾರ ನಷ್ಟಕ್ಕೆ ಒಳಗಾಗಿದ್ದಾರೆ. ಮತ್ತೊಂದು ಕಡೆ ಈ ಪದಾರ್ಥಗಳು ದಿನನಿತ್ಯ ಲಭ್ಯವಾಗದೇ ಜನರು ಅದರಲ್ಲೂ ನಗರವಾಸಿಗಳು ಅತ್ಯಂತ ಕಷ್ಟಕ್ಕೆ ಗುರಿಯಾಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಕೊಯಿಲಿಗೆ ಬಂದ ಹಣ್ಣು, ಹೂವು, ತರಕಾರಿ ಹಾಗೂ ಇನ್ನಿತರ ಬೆಳೆಗಳನ್ನು ಸಾಗಾಣಿಕೆ ಮಾಡಿ ಮಾರಾಟ ಮಾಡಲು ಅವಕಾಶ ಸಿಗದ ಮತ್ತು ಕೇಳಿ ಸಾಕಾಣಿಕೆ ಮಾಡಿ ಮಾರಾಟವಾಗದೇ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರವನ್ನು ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿಯ ಅಡಿಯಲ್ಲಿ ಸರಕಾರ ನೀಡಬೇಕು

೭) ಸರಕಾರ ನೀಡುವ ಅನುದಾನ ಮತ್ತು ಪರಿಹಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತರುವ ಬಗ್ಗೆ ನಮ್ಮ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ಪಕ್ಷಪಾತ ಧೋರಣೆ ಅನುಸರಿಸದೆ ಎಲ್ಲರನ್ನೂ ಸಮಾನವಾಗಿ ಕಾಣುವಂತೆ ತಮ್ಮನ್ನು ಆಗ್ರಹಿಸುತ್ತೇನೆ.

೮) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಮಿಕರೂ ಸೇರಿದಂತೆ ಹೂರ ರಾಜ್ಯಗಳ ಲಕ್ಷಾಂತರ ಜನ ಮತ್ತು ಹೊರ ರಾಜ್ಯಗಳಲ್ಲಿ ನಮ್ಮ ರಾಜ್ಯದ ಜನ ತಮ್ಮ ಊರುಗಳಿಗೆ ತೆರಳಲು ಲಾಕ್ ಡೌನ್ ಕಾರಣದಿಂದಾಗಿ ಸಾಧ್ಯವಾಗದೆ ಮತ್ತು ಸಂಪಾದನೆಯೂ ಇಲ್ಲದೆ ಅತ್ಯಂತ ಕಷ್ಟದಲ್ಲಿ ಬದುಕುತ್ತಿದ್ದಾರೆ. ಅವರ ಬಗ್ಗೆ ಸರ್ಕಾರ ಗಮನ ಹರಿಸಿ ಅವರ ಊರಿಗೆ ಕಳಿಸುವಂತಹ ಏರ್ಪಾಡು ಕೈಗೊಳ್ಳಬೇಕು.

೯)ಕೊರೋನಾ ರೋಗ ಹರಡಿರುವ ವಿಚಾರವಾಗಿ ನಿರ್ಧಿಷ್ಟ ಜಾತಿ, ಧರ್ಮ, ವರ್ಗಗಳನ್ನು ಗುರಿಯಾಸಿ, ಕೊರೋನಾ ರೋಗ ಹರಡಲು ಅವರೇ ಕಾರಣರು ಎಂದು ಕೆಲವು ತಮ್ಮ ಆಪ್ತ ವಲಯದಲ್ಲೇ ಇರುವ ಕೆಲವು ಸಂಸದರು, ಶಾಸಕರು ಹಾಗೂ ಇನ್ನಿತರರು ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. ನಿಮ್ಮದೇ ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ಸುದ್ದಿಗಳನ್ನು ಹರಡುತ್ತಿದ್ದರೂ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮಗಳನ್ನು ಜರುಗಿಸಿರುವುದಿಲ್ಲ. ಬದಲಾಗಿ ರಾಜ್ಯದ ಹಲವಾರು ಕಡೆಗಳಲ್ಲಿ ಆರೋಪಿತರ ಮೇಲೆ ಕೇಸು ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ, ಪೊಲೀಸರ ನೈತಿಕ ಸ್ಥೈರ್ಯವನ್ನು ಸರ್ಕಾರ ಕುಂದಿಸಿರುತ್ತದೆ. ಕೂಡಲೇ ಸರ್ಕಾರ ಇಂತಹ ಪೊಲೀಸರ ಮೇಲೆ ಕೈಗೊಂಡಿರುವ ಕ್ರಮಗಳನ್ನು ವಾಪಸ್ ಪಡೆದು, ಅಪರಾಧ ಎಸಗಿರುವ ಆರೋಪಿತರ ಮೇಲೆ ಕೇಸು ದಾಖಲಿಸಿ, ಅವರನ್ನು ದಸ್ತಗಿರಿ ಮಾಡಬೇಕು.

೧೦) ಲಾಕ್‌ಡೌನ್ ಅವಧಿಯಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿದ ಕಾರಣ ನೋಂದಾಯಿತ ಕಾರ್ಮಿಕರಿಗೆ ಕೆಲಸವೂ ಇಲ್ಲದೇ, ಕೂಲಿಯೂ ಇಲ್ಲದೇ ಜೀವನ ನಡೆಸುವುದೇ ದುಸ್ತರವಾಗಿದೆ. ಆದುದರಿಂದ ಇವರುಗಳಿಗೆ ಲಾಕ್‌ಡೌನ್ ಅವಧಿಯ ದಿನಗೂಲಿಯನ್ನು ಅವರುಗಳ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಜಮಾ ಮಾಡತಕ್ಕದ್ದು ಮತ್ತು ಕೂಡಲೇ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಲು ಸರ್ಕಾರ ಕ್ರಮ ಜರುಗಿಸುವುದು.

೧೧) ಕುಶಲಕರ್ಮಿಗಳಾದ ಸವಿತಾ ಸಮಾಜದವÀರು, ಮಡಿವಾಳರು, ಬಡಗಿಗಳು, ಕುಂಬಾರರು, ನೇಕಾರರು, ಅಕ್ಕಸಾಲಿಗರು, ಚಮ್ಮಾರರು, ಶಿಲ್ಪಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು, ಆಟೋ, ಕ್ಯಾಬ್, ಟ್ರಕ್, ಲಾರಿ, ಮುಂತಾದ ವಾಹನ ಚಾಲಕರು, ಕ್ಲೀನರ್ಗ ಳು, ಅಡುಗೆ ಕೆಲಸದವರು, ಹಮಾಲಿಗಳು, ಪೌರ ಕಾರ್ಮಿಕರು, ದೇವಸ್ಥಾನದ ಅರ್ಚಕರುಗಳು, ಸಣ್ಣಪುಟ್ಟ ವ್ಯಾಪಾರಸ್ಥ ಮುಂತಾದ ವೃತ್ತಿಗಳವರಿಗೆ ಲಾಕ್ಡೌಳನ್ ಅವಧಿಯಲ್ಲಿ ವ್ಯಾಪಾರವಿಲ್ಲದೇ ಅತ್ಯಂತ ನಷ್ಟಕ್ಕೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರುಗಳಿಗೆ ವಿಶೇಷ ಪ್ಯಾಕೇಜ್ ರೂಪಿಸಿ, ಪ್ರತಿಯೊಬ್ಬರಿಗೆ ಪ್ರತಿ ತಿಂಗಳೂ ಕನಿಷ್ಠ ರೂ.೧೦,೦೦೦/-ಗಳನ್ನು ಲಾಕ್ಡೌರನ್ ಅವಧಿಯಲ್ಲಿ ನೀಡತಕ್ಕದ್ದು.

೧೨) ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರದಿಂದ ಬಡವರಿಗೆ ಹಂಚಿಕೆ ಮಾಡುತ್ತಿರುವ ಆಹಾರ ಮತ್ತು ಆಹಾರ ಪದಾರ್ಥಗಳ ಕಿಟ್‌ಗಳ ಮೇಲೆ ನಮೂದಿಸಿರುವ ಸರ್ಕಾರಿ ಎಂಬ್ಲೆಮ್ಗಿಳ ಮೇಲೆ ಆಡಳಿತ ಪಕ್ಷದ ನಾಯಕರುಗಳ ಹಾಗೂ ಶಾಸಕರುಗಳ ಮತ್ತು ಪಕ್ಷದ ಚಿನ್ಹೆ ಹೊಂದಿರುವ ಲೇಬಲ್ಗಿಳನ್ನು ಅಂಟಿಸಿ ನಮ್ಮ ಪಕ್ಷದಿಂದಲೇ ಆಹಾರ ವಿತರಣೆ ಮಾಡಲಾಗುತ್ತಿದೆಯೆಂದು ಮತದಾರರನ್ನು ಓಲೈಸಿಕೊಳ್ಳುವ ನೀಚ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಿ, ಘನತೆಯಿಂದ ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳುವುದು.

೧೩) ಕೊರೋನಾ ರೋಗದ ಕಾರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳು ನಡೆಯುತ್ತವೋ ಇಲ್ಲವೋ, ನಡೆಯುವುದಾದರೆ ಯಾವಾಗ ನಡೆಯುತ್ತವೋ ಎಂಬ ಆತಂಕದಲ್ಲಿದ್ದಾರೆ. ಈ ಆತಂಕವನ್ನು ದೂರ ಮಾಡಲು ಸರ್ಕಾರ ಕೂಡಲೇ ಕ್ರಮ ಜರುಗಿಸುವುದು. ಅಲ್ಲದೆ ಅವರಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡುವ ಬಗ್ಗೆ ತಮ್ಮ ಸರ್ಕಾರ ಪ್ರಸ್ತಾಪ ಮಾಡಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕವೇ ಇಲ್ಲ. ಮೊದಲು ದಯವಿಟ್ಟು ಅದನ್ನು ಕಲ್ಪಿಸುವ ವ್ಯವಸ್ಥೆ ಮಾಡಿ.

೧೪) ಪ್ರಸ್ತುತ ರಾಜ್ಯದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಿ, ಕೊರೋನಾ ರೋಗದ ನಿವಾರಣೆ ಮತ್ತು ಜನರಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬುವ ಸಲುವಾಗಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಸ್ತುವಾರಿ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರುಗಳು ಜಿಲ್ಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಧಿಕಾರಿಗಳ ಸಭೆಗಳನ್ನು ನಡೆಸಿ, ಸಂಕಷ್ಟದ ಸಂದರ್ಭವನ್ನು ಸೂಕ್ತವಾಗಿ ನಿಭಾಯಿಸಲು ಒತ್ತಾಯಿಸುತ್ತೇವೆ.

೧೫) ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿದ್ದರೂ ಕೇಂದ್ರಸರಕಾರ ನಮ್ಮ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆ ಪರಿಹಾರ, ತೆರಿಗೆ, ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು, ಕೊರೋನಾ ಸೋಂಕು ನಿಯಂತ್ರಣಕ್ಕೆ ನೀಡಬೇಕಾದ ಅನುದಾನ- ಮುಂತಾದ ವಿಷಯಗಳಿಗೆ ಸಂಬAಧಿಸಿದAತೆ ತಾವೇ ಅನೇಕ ಬಾರಿ ಪ್ರಸ್ತಾಪಿಸಿದ್ದೀರಿ. ವಿರೋಧ ಪಕ್ಷಗಳ ಮುಖಂಡರ ಸಹಿತ ಒಂದು ನಿಯೋಗವನ್ನು ದೆಹಲಿಗೆ ಕೊಂಡೊಯ್ದು ನಮಗಾಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಒತ್ತಾಯಿಸುತ್ತೇವೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ.

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html casino sitelerimaç izle