ನಿಮ್ಮ ಜಿಲ್ಲೆ

ಲಾಕ್ ಡೌನ್ ನಡುವೆಯೂ ಕಳ್ಳಬಟ್ಟಿ ಸಾಗಾಟ, ಇಬ್ಬರ ಬಂಧನ

Published

on

ಲಿAಗಸೂಗೂರು(ರಾಯಚೂರು):ಲಾಕ್ ಡೌನ್ ನಡುವೆಯೂ ರಾಯಚೂರು-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಕೊಂಡೊಯ್ಯುತ್ತಿದ್ದ ಆರೋಪಿಗಳನ್ನ ರಾತ್ರಿ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿಮಾಡಿ ಬಂಧಿಸಿದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್ ಡೌನ್ ಮುಂದುವರೆಸಿದ್ದು,ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಾರ್ವಜನಿಕರು ರಸ್ತೆಗಿಳಿಯದಂತೆ ಸೂಚಿಸಲಾಗಿದೆ.ಆದರೂ ಜನ ಕೇಳುತ್ತಿಲ್ಲ,ಜೊತೆಗೆ ಕೆಲವರು ಕಳ್ಳಬಟ್ಟಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದರು.ಈ ವೇಳೆ ಖಚಿತ ಮಾಹಿತಿ ಪಡೆದು ದಾಳಿ ಮಾಡಲಾಗಿದೆ.
ಇನ್ನು ಲಿಂಗಸುಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿರುವ ನವೋದಯ ಶಾಲೆ ಬಳಿ ಈ ದಾಳಿ ಮಾಡಲಾಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ೩೦ ಲೀಟರ್ ಕಳ್ಳಬಟ್ಟಿ, ೧೦೦ ಕೆಜಿ ಬೆಲ್ಲ ಮತ್ತು ೫ ದ್ವಿಚಕ್ರ ವಾಹನಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪ್ರತ್ಯೇಕವಾಗಿ ಐದು ಪ್ರಕರಣಗಳನ್ನ ದಾಖಲಿಸಲಾಗಿದೆ.
ಇನ್ನು ಬಂಧಿತ ಆರೋಪಿಗಳನ್ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ರಾಯಚೂರು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ..

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು(ರಾಯಚೂರು)

Click to comment

Trending

Exit mobile version