ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ಗುಡುಗು

ಬೆಂಗಳೂರು: ಕೊರೊನಾ ಸೋಂಕು ಮನುಕುಲಕ್ಕೆ ಬಂದಿರುವ ಮಾರಣಾಂತಿಕ ರೋಗ. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಟ ನಡೆಸಬೇಕಿದೆ. ಆದರೆ ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಈ ರೋಗಕ್ಕೆ ಜಾತಿ – ಧರ್ಮದ ಲೇಪನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.
ಸರ್ಕಾರದ ತೀರ್ಮಾನಗಳಿಗೆ ನಮ್ಮ ಸಹಕಾರ ಇದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ಸಾಥ್ ನೀಡೋಣ. ಸರ್ಕಾರ ಎಲ್ಲಾ ಸಿಬ್ಬಂದಿಗಳನ್ನು ಬಳಸಿಕೊಂಡು ಕೊರೊನಾ ವಿರುದ್ಧ ಹೋರಾಡಬೇಕು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
ಆದರೆ ಇಂತಹ ಸಂದಿಗ್ಧ ಸಂದರ್ಭದಲ್ಲೂ ಬಿಜೆಪಿ ನಾಯಕರು ಈ ಸೋಂಕಿಗೆ ಜಾತಿ-ಧರ್ಮದ ಲೇಪನ ಮಾಡುತ್ತಿರುವುದು ವಿಪರ್ಯಾಸ. ಈ ದುರಂತವನ್ನು ಸಮಾಜದ ಯಾವುದೇ ಒಂದು ವರ್ಗದ ಜನರಿಗೆ ಆರೋಪಿಸುವುದು ಸರಿಯಲ್ಲ. ಬಿಜೆಪಿ ನಾಯಕರು ಇಂತಹ ಹೇಳಿಕೆ ನೀಡದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment