ಅಪಘಾತದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಸಾವು

ರಾಮನಗರ: ರಸ್ತೆ ಅಪಘಾತದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರರೊಬ್ಬರು ಸಾವು ಕಂಡಿರುವ ಘಟನೆ ರಾಮನಗರದ ಕಾರಾಗೃಹದ ಬಳಿ ನಡೆದಿದೆ.

ಹನುಮಂತು,ಸಾವು ಕಂಡ ಖಾಸಗಿ ಸುದ್ದಿವಾಹಿನಿ ವರದಿಗಾರನಾಗಿದ್ದು, ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿAದ ಬಂದ ಎಟಿಂಗೆ ಹಣ ತುಂಬುವ ವಾಹನ ಡಿಕ್ಕಿ ಹೊಡೆದಿದೆ.ಪರಿಣಾಮ ವರದಿಗಾರ ಹನುಮಂತು ಸಾವಿಗೀಡಾಗಿದ್ದಾರೆ.

ಅಂದ ಹಾಗೇ ಹನುಮಂತು ಕಳೆದ ೬ ವರ್ಷಗಳಿಂದಲೂ ಖಾಸಗಿ ಸುದ್ದಿವಾಹಿನಿಯಲ್ಲಿ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ..

ಇದೇ ವೇಳೆ ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟ ವರದಿಗಾರ ಹನುಮಂತು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ,ಭಗವAತನು ಹನುಮಂತು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಕಾಲಿಕ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ,ವರದಿಗಾರ ಹನುಮಂತು ಅವರ ನಿಧನಕ್ಕೆ ಎಲ್ಲೆಡೆಯಿಂದ ತೀವ್ರ ಸಂತಾಪ ವ್ಯಕ್ತವಾಗಿದೆ. ಅದರಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹನುಮಂತು ಅವರ ನಿಧನಕ್ಕೆ ಸಂತಾಪ ಸೂಚಿಸಿ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಟ್ವೀಟ್ ಮಾಡಿ,ಹನುಮಂತು ಅವರ ಅಕಾಲಿಕ ಮರಣ ದುಃಖ ತಂದಿದೆ. ಸದಾ ಕ್ರಿಯಾಶೀಲ, ಉತ್ಸಾಹಿ, ದಿಟ್ಟ ಪತ್ರಕರ್ತರಾಗಿದ್ದ ಅವರು ಪ್ರಾಮಾಣಿತೆಯನ್ನು ನಂಬಿದ್ದರು. ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ. ಕುಟುಂಬಕ್ಕೆ ವೈಯಕ್ತಿಕವಾಗಿ ೫ ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಹನುಮಂತು ನಿಧನಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಹ ಸಂತಾಪ ಸೂಚಿಸಿ ೫ ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ರಾಮನಗರ

Please follow and like us:

Related posts

Leave a Comment