ಆ ಗ್ರಾಮ ಪಂಚಾಯ್ತಿಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ..!

ಮಾಲೂರು:(ಕೋಲಾರ)ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊAದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಸಂತೇಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಕುಟುಂಬದವರನ್ನು ಕಳೆದ ಎರಡು ದಿನದ ಹಿಂದೆ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಇನ್ನು ಅನಾವಶ್ಯಕವಾಗಿ ಕ್ವಾರಂಟೈನ್ ಮಾಡಿದ್ದಾರೆಂದು ಆರೋಪಿಸಿರುವ ಕುಟುಂಬದ ಸದಸ್ಯರು, ಗ್ರಾಮ ಪಂಚಾಯ್ತಿ ಕಚೇರಿಗೆ ಬಂದು ಆಕ್ರೋಶ ವ್ಯಕ್ತಪಡಿಸಿದರು.ಇಷ್ಟು ಮಾತ್ರವಲ್ಲದೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ಹೈಡ್ರಾಮಾ ಸೃಷ್ಟಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಮಾಲೂರು ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಪೊಲೀಸರು ಮಂಜುನಾಥ್ ಕುಟುಂಬಸ್ಥರನ್ನು ಮನವೊಲಿಸಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕೋಲಾರ

Please follow and like us:

Related posts

Leave a Comment