ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ

ಬೆAಗಳೂರು : ಕೊರೊನಾ ವೈರಸ್ ನ ಹಾವಳಿಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊAಡಿದ್ದು, ಆಡಳಿತ ಯಂತ್ರಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ, ತುರ್ತಾಗಿ ಕೈಗೊಳ್ಳಬೇಕಾದ ಇಲಾಖೆವಾರು ಕ್ರಮಗಳ ಕುರಿತು ಚರ್ಚೆ ನಡೆಸಿದರು. ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಖರೀದಿಸಿ ಅವುಗಳನ್ನು ಕೋಲ್ಡ್ ಸ್ಟೋರೇಜ್‌ಗಳಲ್ಲಿ ಸಂಗ್ರಹಿಸಿ ಮಾರಾಟ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ, ಹಣ್ಣು ಮತ್ತು ತರಕಾರಿಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಹಾಗೂ ವಿದೇಶಗಳಿಗೆ ರಫ್ತು ಮಾಡುವ ಕುರಿತು ಚಿಂತನೆ ನಡೆಸಲಾಯಿತು.
ಶುದ್ಧ ಕುಡಿಯುವ ನೀರು ಎಲ್ಲರಿಗೂ ಸಿಗುವಂತೆ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಡ್ಯಾಂಗಳಲ್ಲಿ ಹೆಚ್ಚುವರಿ ನೀರು ಇದ್ದರೆ, ಅದನ್ನು ರೈತರ ಬೆಳೆಗಳಿಗೆ ಹರಿಸುವಂತೆ ಸೂಚಿಸಲಾಗಿದೆ. ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಡಿಮೆ ಬೆಲೆಯಲ್ಲಿ ಗೊಬ್ಬರ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರೈತರಿಗೆ ಸೂಕ್ತ ತಿಳುವಳಿಕೆ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇಶೀಯ ಪ್ರವಾಸಿಗರನ್ನು ಆಕರ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಮಕ್ಕಳಿಗೆ ಆನ್‌ಲೈನ್ ತರಬೇತಿ ನೀಡಲು ಸೂಚನೆ ನೀಡಲಾಗಿದೆ. ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ವಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ, ಇನ್ನೂ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment