ಅರಕಲಗೂಡಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೀದರ್‌ಗೆ ಹೊರಟ ನಿರಾಶ್ರಿತರು.

ಅರಕಲಗೂಡು(ಹಾಸನ):ಮಹಾಮಾರಿ ಕೊರೊನಾ ಲಾಕ್ ಡೌನ್ ಸಂಕಷ್ಟದಿAದಾಗಿ ಪಟ್ಟಣದ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬೀದರ್ ಜಿಲ್ಲೆಯ ೧೦ ಜನ ನಿರಾಶ್ರಿತರನ್ನು ತಾಲೂಕು ಆಡಳಿತದ ವತಿಯಿಂದ ಇಂದು ಸಂಜೆ ಬೀಳ್ಕೊಟ್ಟು ಕಳುಹಿಸಲಾಯಿತು.
ಅಂದ ಹಾಗೇ ನಿರಾಶ್ರಿತರನ್ನು ಕೆಎಸ್‌ಆರ್‌ಟಿಸಿ ಬಸ್‌ಗೆ ಹತ್ತಿಸಿ ಬೀಳ್ಕೊಟ್ಟು ಮಾತನಾಡಿದ ತಹಸೀಲ್ದಾರ್ ವೈ.ಎಂ.ರೇಣುಕುಮಾರ್,
ಊಟ, ತಿಂಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ನಿರಾಶ್ರಿತರಿಗೆ ಯಾವುದೇ ಕೊರತೆ ಎದುರಾಗದಂತೆ ನಿಗಾ ವಹಿಸಲಾಗಿತ್ತು.ಜೊತೆಗೆ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಸೌಲಭ್ಯ ಒದಗಿಸಲಾಗಿತ್ತು. ಇಂದು ಸರ್ಕಾರದ ಆದೇಶದ ಮೇರೆಗೆ ನಿರಾಶ್ರಿತರಿಗೆ ಉಚಿತವಾಗಿ ಬಸ್ ವ್ಯವಸ್ಥೆ ಮಾಡಿ ಸ್ವಗ್ರಾಮಕ್ಕೆ ಕಳುಹಿಸಲಾಗುತ್ತಿದೆ.ನಿರಾಶ್ರಿತರು ಬಸ್‌ನಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಂಡಿಕೊಳ್ಳುವ ಉದ್ದೇಶದಿಂದ ೧೦ ಜನರಿಗೆ ಒಂದು ಸಾರಿಗೆ ಬಸ್ ಉಚಿತವಾಗಿ ಒದಗಿಸಲಾಗಿದೆ ಎಂದು ತಿಳಿಸಿದರು.
ಇನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ದೀಪಕ್, ಸಮಾಜ ಕಲ್ಯಾಣಾಧಿಕಾರಿ ಭಾಗೀರಥಿ, ಸಿಪಿಐ ದೀಪಕ್, ಸಬ್ ಇನ್ಸ್ ಪೆಕ್ಟರ್ ವಿಜಯಕೃಷ್ಣ ಇತರರು ಇದ್ದರು.

ಎ.ಎಸ್ ಸಂತೋಷ್ ಎಕ್ಸ್ ಪ್ರೆಸ್ ಟಿವಿ ಅರಕಲಗೂಡು(ಹಾಸನ)

Please follow and like us:

Related posts

Leave a Comment