ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಂದ ಹಾಗೇ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ವ್ಯಕ್ತಿ ಪಿ-೪೬೬ ಎಂದು ತಿಳಿದು ಬಂದಿದೆ.
ಇನ್ನು ವಿಕ್ಟೊರಿಯಾ ಆಸ್ಪತ್ರೆಯ ಟ್ರಾಮಾಕೇರ್ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಈ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಕಿಡ್ನಿ ತೊಂದರೆಯಿAದಲೂ ಬಳಲುತ್ತಿದ್ದ ಮೃತ ವ್ಯಕ್ತಿಗೆ ನಿನ್ನೆ ವೈದ್ಯರು ಡಯಾಲಿಸಿಸ್ ಮಾಡಿದ್ದರು. ತೀವ್ರ ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಆತ ಇಂದು ಬೆಳಗ್ಗೆ ಮೂರನೇ ಅಂತಸ್ತಿನಿAದ ಬಿದ್ದು ಸಾವಿಗೆ ಶರಣಾಗಿದ್ದಾನೆಂದು ಎಂದು ಹೇಳಲಾಗಿದೆ.
ಈ ನಡುವೆ ವಿಷಯ ತಿಳಿದು ಸ್ಥಳಕ್ಕೆ ವೈದ್ಯಕೀಯ ಖಾತೆ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ವೈದರಿಂದ ಮಾಹಿತಿ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವ್ಯಕ್ತಿ ಆಟೋ ಚಾಲಕನಾಗಿದ್ದ.ಅಲ್ಲದೆ, ತೀವ್ರ ಉಸಿರಾಟ ತೊಂದರೆಯಿAದ ಬಳಲುತ್ತಿದ್ದ ಈತನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಯಕ್ಕೊಳಗಾಗಿ ಈ ರೀತಿ ಮಾಡಿಕೊಂಡಿರಬಹುದು ಎಂದರು.
ಇದಲ್ಲದೆ, ಮೃತ ವ್ಯಕ್ತಿ ಬೆಂಗಳೂರಿನಲ್ಲಿ ತನ್ನ ಅಣ್ಣನ ಮನೆಯಲ್ಲಿ ವಾಸವಾಗಿದ್ದ.ಈತನಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಈತನ ಮನೆಯವರನ್ನೀಗ ಹೊಟೇಲ್‌ನಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು