ಆರೋಗ್ಯ / HEALTH

ಸಿಂಧನೂರಿಗೆ ಡಿಸಿಎಂ ಭೇಟಿ, ಸಾಮಾಜಿಕ ಅಂತರ ಮರೆತ ಸವದಿ..

Published

on

ಸಿಂಧನೂರು(ರಾಯಚೂರು): ರಾಯಚೂರು ಜಿಲ್ಲೆಗಿಂದು ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಳೆ,ಗಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು, ಮಳೆ, ಗಾಳಿಯಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಹಾನಿಯಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.ಇದರ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ ಅವರು ರೈತರ ಜೊತೆ ಸಮಾಲೋಚನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಇದಾದ ಬಳಿಕ ಸಿಂಧನೂರಿಗೆ ಭೇಟಿ ನೀಡಿದ್ದ ಡಿಸಿಎಂಗೆ ರಾಜ್ಯ ಕಾಂಗ್ರೆಸ್‌ನ ಯುವಕ ಘಟಕದ ಅಧ್ಯಕ್ಷ ಬಸವನಗೌಡ ಬಾದರ್ಲಿ ಹಾಗೂ ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಕರಿಯಪ್ಪ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಆದರೆ ಮನವಿ ಸ್ವೀಕರಿಸುವ ವೇಳೆ ಡಿಸಿಎಂ ಲಕ್ಷ್ಮಣ ಸವದಿ ಸಾಮಾಜಿಕ ಅಂತರ ಕಾಪಾಡುವುದನ್ನು ಮರೆತಿದ್ದದ್ದು ಕಂಡು ಬಂತು.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು(ರಾಯಚೂರು)

Click to comment

Trending

Exit mobile version