ಕಲಬುರಗಿಯಲ್ಲಿ ಕೊರೊನಾ ಸೋಂಕಿತ ಸಾವು,ಮಂಡ್ಯದಲ್ಲಿ ಮತ್ತೇರೆಡು ಕೇಸ್

ಕಲಬುರಗಿ/ಮಳವಳ್ಳಿ(ಮಂಡ್ಯ): ರಾಜ್ಯದಲ್ಲಿ ಕೊರೊನಾ ಸೋಕಿಂತ ವ್ಯಕ್ತಿ ಸಾವು ಕಂಡಿದ್ದು,ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ ೨೦ಕ್ಕೆ ಏರಿಕೆಯಾಗಿದೆ.
ಅಂದ ಹಾಗೇ ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಕಲಬುರಗಿ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ವೈದ್ಯಕೀಯ ಸಚಿವ ಕೆ.ಸುಧಾಕರ್ ದೃಢಪಡಿಸಿದ್ದು,ರಾಜ್ಯದಲ್ಲಿ ಕೋವಿಡ್ ೧೯ ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ೫೭ ವರ್ಷದ ಅಳಂದದ ನಿವಾಸಿಯಾಗಿದ್ದ ಇವರಿಗೆ ಏಪ್ರಿಲ್ ೨೧ರಂದು ಕೊರೊನಾ ಪಾಸಿಟಿವ್ ಬಂದಿತ್ತು.
ಬಳಿಕ ಉಸಿರಾಟದ ತೊಂದರೆಯಿAದ ಜಿಮ್ಸ್ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು.ಆದರೆ ಇಂದು ಸಾವು ಕಂಡಿದ್ದಾರೆ.ಇದರೊAದಿಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು ೫ ಕೋವಿಡ್ ಮರಣ ಸಂಭವಿಸಿದAತಾಗಿದೆ ಎಂದು ಸಚಿವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇಂದು ೯ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ೫೧೨ಕ್ಕೆ ಏರಿದ್ದು, ಸಾವಿನ ಸಂಖ್ಯೆ ೨೦ಕ್ಕೆ ತಲುಪಿದೆ. ಇದುವರೆಗೂ ಕೊರೊನಾದಿಂದ ೧೯೩ ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟು ೧೧ ಮಂದಿ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ನಡುವೆ ಸಕ್ಕರೆನಾಡಲ್ಲಿ ಮತ್ತೊಂದು ಕೊರೊನಾ ಪ್ರಕರಣ ಧೃಡವಾಗಿದ್ದು,ಈ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೧೮ಕ್ಕೇರಿದೆ.ಸದ್ಯ ಮಳವಳ್ಳಿಯ ೨೨ ವರ್ಷದ ಮಹಿಳೆಗೆ ಕೊಂರೊನಾ ಸೋಂಕು ತಗುಲಿದ್ದು,ಈಕೆ ಪಿ-೩೭೧ರ ಸೋಂಕಿತನ ಸಂಪರ್ಕದಲ್ಲಿದ್ದ ಮಹಿಳೆ ಎಂದು ತಿಳಿದು ಬಂದಿದೆ.
ಇದಲ್ಲದೆ, ಜಿಲ್ಲೆಯಲ್ಲಿ ಇಂದು ಒಂದೇ ದಿನ ಎರಡು ಕೊರೊನಾ ಪ್ರಕರಣ ಪತ್ತೆಯಾಗಿದ್ದು,ಮಳವಳ್ಳಿ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೧೫ ಕ್ಕೇರಿದೆ. ಹೀಗಾಗಿ ಸೋಂಕಿತರ ಸಂಖ್ಯೆ ಹೆಚ್ಚಳದಿಂದ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕಲಬುರಗಿ-ಮಂಡ್ಯ

Please follow and like us:

Related posts

Leave a Comment