ಆಟೋ ಚಾಲಕರಿಗೆ ಆಹಾರ ಕಿಟ್ ಒದಗಿಸಿ

ಲಿಂಗಸೂಗೂರು(ರಾಯಚೂರು): ಲಾಕ್‌ಡೌನ್ ಜಾರಿ ಹಿನ್ನೆಲೆಯಲ್ಲಿ ದಿನನಿತ್ಯ ಆಟೋ ಚಾಲನೆ ಮಾಡಿ ತಮ್ಮ ಉಪ ಜೀವನವನ್ನು ನಡೆಸುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಹಲವಾರು ಗೂಡ್ಸ್ ಹಾಗೂ ಪ್ಯಾಸೆಂಜರ್ ಆಟೋ ಚಾಲಕರು ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ.
ಸದ್ಯ ಅವರ ಕುಟುಂಬದ ನಿರ್ವಹಣೆ ಕಷ್ಟವಾಗಿದೆ.ಹೀಗಾಗಿ ಈ ಆಟೋ ಚಾಲಕರಿಗೆ ಪಡಿತರ ಕಿಟ್ ವಿತರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮುದಗಲ್ ಘಟಕ ಒತ್ತಾಯಿಸಿದೆ.
ಅಲ್ಲದೆ,ಈ ಸಂಬAಧ ಕರ್ನಾಟಕ ರಕ್ಷಣಾ ವೇದಿಕೆ ಮುದಗಲ್ ಘಟಕದ ಅಧ್ಯಕ್ಷ ಎಸ್.ಎ.ನಯಿಮ್ ಪುರಸಭೆ ಮುಖ್ಯಾಧಿಕಾರಿ ನರಸಿಂಹಮೂರ್ತಿ ಮೂಲಕ ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು(ರಾಯಚೂರು)

Please follow and like us:

Related posts

Leave a Comment