ತುಮಕೂರು ಡಿಸಿ ಖಡಕ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?

ತುಮಕೂರು: ವಿಶ್ವದಲ್ಲಿ ಹರಡುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸುಮಾರು ಷರತ್ತುಗಳನ್ನು ಒಳಪಡಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ತಿಳಿಸಲಾಗಿದ್ದು, ತುಮಕೂರು ನಗರದ ೧೦ ಮಸೀದಿಗಳಲ್ಲಿ ಬೇರೆ ಜಿಲ್ಲೆ, ರಾಜ್ಯ ಮತ್ತು ವಿದೇಶದಿಂದ ಜಮಾತ್ ಸದಸ್ಯರು ತಂಗಿರುವುದು ಕಂಡು ಬಂದಿದೆ.
ಈಗಾಗಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿರುವ ಮಸೀದಿಗಳನ್ನು ಹೊರತುಪಡಿಸಿ ಇನ್ನಿತರೆ ಮಸೀದಿಗಳಲ್ಲಿ ಜಮಾತ್ ಸದಸ್ಯರು ತಂಗಿದ್ದಲ್ಲಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾ ವಕ್ಫ್ ಅಧಿಕಾರಿ ಮಸೀದಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಲ್ಲಿ ತುಮಕೂರು ಡಿಸಿ ಮನವಿ ಮಾಡಿದ್ದಾರೆ.
ಇನ್ನು ಈ ರೋಗ ಹರಡದಂತೆ ಸರ್ಕಾರದೊಂದಿಗೆ ಎಲ್ಲರೂ ಕೈಜೋಡಿಸಬೇಕು. ತಪ್ಪಿದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬAಧಪಟ್ಟ ಮಸೀದಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Please follow and like us:

Related posts

Leave a Comment