ಆರೋಗ್ಯ / HEALTH

ಯಾದಗಿರಿಯಲ್ಲಿ ಯಾರೊಬ್ಬರು ಹಸಿವಿನಿಂದ ಬಳಲಬಾರದು..

Published

on

(ಶಹಾಪುರ)ಯಾದಗಿರಿ: ಶಹಾಪುರ ತಾಲೂಕಿನ ಹಬ್ಬಳ್ಳಿ, ಮರಮಕಲ್, ಸಲಾದಪೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಆಯಾ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಆರ್‌ಓ ಪ್ಲಾಂಟ್‌ಗಳನ್ನು ವೀಕ್ಷಿಸಿದರು. ಅಲ್ಲದೆ ಗ್ರಾಮಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದರು, ಹಳ್ಳಿಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಅವಶ್ಯಕತೆಯಾಗಿದ್ದು, ಜನರ ಬೇಡಿಕೆಗೆ ಶೀಘ್ರ ಸ್ಪಂಧನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಕೊರೊನಾ ವೈರಸ್‌ನಿಂದ ಇಡಿ ದೇಶ ತಲ್ಲಣಗೊಂಡಿದ್ದು, ಲಾಕ್‌ಡೌನ್ ನೀತಿ ಅಳವಡಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರು ಸಾಮಾಜಿಕ ಅಂತರತೆಯನ್ನು ಕಾಯ್ದುಕೊಳ್ಳುವಂತೆ ಮನವರಿಕೆ ಮಾಡಿದರು.
ಯಾರೊಬ್ಬರು ಹಸಿವಿನಿಂದ ಬಳಲಬಾರದು.ಅಂತಹ ಸ್ಥಿತಿ ಇದ್ದಲ್ಲಿ ಕೂಡಲೇ ಗ್ರಾ.ಪಂ. ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಆಹಾರ ಧಾನ್ಯ ಒದಗಿಸುವ ವ್ಯವಸ್ಥೆ ಮಾಡಲಾಗುವುದು.ಜೊತೆಗೆ ರೇಷನ್ ವಿತರಿಸಲು ಸೂಚಿಸಲಾಗುವದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ರಾಜಕುಮಾರ ಪತ್ತಾರ ಸೇರಿದಂತೆ ಗ್ರಾಮದ ಮುಖಂಡರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ನಾಗರಾಜ್ ಮನ್ನಾಪೂರಿ ಎಕ್ಸ್ ಪ್ರೆಸ್ ಟಿವಿ (ಶಹಾಪುರ)ಯಾದಗಿರಿ

Click to comment

Trending

Exit mobile version