ಪಾವಗಡಕ್ಕೆ ತುಮಕೂರು ಡಿಸಿ, ಎಸ್ಪಿ ಭೇಟಿ

ಪಾವಗಡ(ತುಮಕೂರು):ಕೋವಿಡ್ ೧೯ ರ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ ಪಾವಗಡಕ್ಕೆ ಭೇಟಿ ನೀಡಿದರು.
ಈ ವೇಳೆ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಬೇರೆ ಊರುಗಳಿಂದ ಬಂದವರು, ಫೀಲ್ಡ್ ನಲ್ಲಿ ಆಗುತ್ತಿರುವ ತೊಂದರೆ, ಕೋವಿಡ್ ೧೯ ರ ಬಗ್ಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತಂತೆ ಮಾಹಿತಿ ಪಡೆದರು. ಜೊತೆಗೆ ಕೆಲವು ಸೂಚನೆಗಳನ್ನು ನೀಡಿ ಆಶಾ ಕಾರ್ಯಕರ್ತರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮ ಸೆಳೆಯುವುದಾಗಿ ತಿಳಿಸಿದರು.
ಇದೇ ವೇಳೆ ಪಾವಗಡ ಪೊಲೀಸ್ ಠಾಣೆಗೆ ಭೇಟಿ ಕೊಟ್ಟು, ಠಾಣೆಗೆ ಬರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಬರುವವರೊಂದಿಗೆ ಮಾತನಾಡುವ ಸಲುವಾಗಿ ನೂತನವಾಗಿ ನಿರ್ಮಿಸಲಾಗಿರುವ ಸೇಪ್ಟಿ ಸೆಂಟ್ರಿ ಬಾಕ್ಸ್ ಅನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಉದ್ಘಾಟಿಸಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ತುಮಕೂರು

Please follow and like us:

Related posts

Leave a Comment