ಇಂಡಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಮೆಚ್ಚುಗೆ

ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೀಮಾ ದಡದ ಬುಯ್ಯಾರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಜನರ ಆರೋಗ್ಯದ ಸ್ಥಿತಿಗತಿಯ ಸಮೀಕ್ಷೆ ನಡೆಸಿ ಮಾಹಿತಿ ಕಲೆಹಾಕಿದರು.
ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯತ್ ಸದಸ್ಯ ಹುಚ್ಚಪ್ಪ ಸ್ಯಾನಿಟೈಸರ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಸಿಂಗ್ ರಾಠೋಡ, ಗ್ರಾಮ ಲೆಕ್ಕಾಧಿಕಾರಿ ಸಿದ್ದು ಪೂಜಾರಿ,ಆರೋಗ್ಯ ಅಧಿಕಾರಿ ಅನಿಲ ರಾಠೋಡ, ಪೊಲೀಸ್ ಸಿಬ್ಬಂದಿ ಸಂಜು ಕಾಂಬಳೆ ಹಾಜರಿದ್ದರು.

ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ(ವಿಜಯಪುರ)

Please follow and like us:

Related posts

Leave a Comment