ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು:ಲಾಕ್‌ಡೌನ್‌ನಿAದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.
ಕಳೆದ ಒಂದೂವರೆ ತಿಂಗಳಿನಿAದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಹೀಗಾಗಿ ಸರ್ಕಾರ ಅವರ ಸಹಾಯಕ್ಕೆ ಮುಂದಾಗಿದೆ.
ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರ ರೂ. ೧,೬೧೦ ಕೋಟಿಯ ವಿಶೇಷ ಪ್ಯಾಕೇಜ್ ಪ್ರಕಟಿಸಿದೆ.
ಅಗಸರು ಹಾಗೂ ಕ್ಷೌರಿಕರಿಗೆ ತಲಾ ರೂ. ೫ ಸಾವಿರ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು ೬೦ ಸಾವಿರ ಅಗಸರು ಹಾಗೂ ೨.೩೦ ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ.
ರಾಜ್ಯದಲ್ಲಿರುವ ೭.೭೫ ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. ೫ ಸಾವಿರ ಪರಿಹಾರ ನೀಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ೫೪ ಸಾವಿರ ನೇಕಾರರಿಗೆ ವರ್ಷಕ್ಕೆ ರೂ. ೨ ಸಾವಿರ ರೂ ನೆರವು ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ಸರ್ಕಾರವು ಹೆಕ್ಟೇರ್‌ಗೆ ಗರಿಷ್ಠ ರೂ.೨೫ಸಾವಿರದಂತೆ ಪರಿಹಾರ ನೀಡಲಿದೆ. ಅಲ್ಲದೇ, ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್ ಅನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು ಎಂದು ಹೇಳಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment