ಮೈಸೂರು : ಸಂಸದ ಪ್ರತಾಪ ಸಿಂಹ ಹಾಗೂ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮೈಸೂರಿನಲ್ಲಿ ಜರುಗಿದೆ.ಸದ್ಯ ಸುಯೇಜ್ ಫಾರಂ ವಿಚಾರದಲ್ಲಿ ಇವರಿಬ್ಬರ ನಡುವೆ ವಾಕ್ಸಮರ ನಡೆದಿದೆ ಎಂದು ಗೊತ್ತಾಗಿದೆ.
ಅಂದ ಹಾಗೇ ಮೈಸೂರಿನ ಮುಡಾ ಕಚೇರಿಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಗರಾಭಿವೃದ್ಧಿ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ಕರೆದಿದ್ದರು.
ಈ ವೇಳೆ ಸುಯೇಜ್ ಫಾರಂ ಕಸ ವಿಲೇವಾರಿಗೆ ವರ್ಕ್ ಆರ್ಡರ್ ಆಗಿದೆ ಎಂದು ಸಂಸದ ಪ್ರತಾಪ ಸಿಂಹ ವಾದಿಸಿದಾಗ, ಆರ್ಡರ್ ಬಗ್ಗೆ ನನಗೆ ಮಾಹಿತಿಯೇ ಇಲ್ಲ ಎಂದು ರಾಮದಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜುಗೆ ಸುಯೋಜ್ ಫಾರಂ ವಿಚಾರವಾಗಿ ಶಾಸಕ ರಾಮದಾಸ್ ಮಾಹಿತಿ ನೀಡುತ್ತಿದ್ದ ವೇಳೆ ಸಂಸದ ಪ್ರತಾಪ್ ಸಿಂಹ ಮಧ್ಯ ಪ್ರವೇಶಿಸಿದಾಗ ಚರ್ಚೆಯಲ್ಲಿ ಗೊಂದಲ ಉಂಟಾಯಿತು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಮೈಸೂರು
ಬಿಜೆಪಿ ಸಂಸದ ಪ್ರತಾಪ ಸಿಂಹ-ಶಾಸಕ ರಾಮದಾಸ್ ನಡುವೆ ವಾಕ್ಸಮರ

Please follow and like us: