ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ನಿನ್ನೆ ರಾತ್ರಿಯೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂದ ಹಾಗೇ ಹೃದಯ ಸಂಬAಧಿ ಕಾಯಿಲೆಯಿಂದ ಬಳಲುತ್ತಿರುವ ಡಾ.ಮನಮೋಹನ್ ಸಿಂಗ್‌ರಿಗೆ ಚಿಕಿತ್ಸೆ ಮುಂದುವರೆದಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
ಇನ್ನು ೨೦೦೯ ರಲ್ಲಿ ಡಾ.ಸಿಂಗ್ ಪ್ರಧಾನಿಯಾಗಿದ್ದಾಗರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಅದಕ್ಕೂ ಮುನ್ನ ೨೦೦೪ ರಲ್ಲಿ ಅವರಿಗೆ ಸ್ಟೆಂಟ್ ಅಳವಡಿಸಲಾಗಿತ್ತು. ೧೯೯೦ ರಲ್ಲಿ ಡಾ. ಮನಮೋಹನ್ ಸಿಂಗ್ ಅವರಿಗೆ ಲಘು ಹೃದಯಾಘಾತವಾಗಿತ್ತು.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment