ರೈಲು ಸಂಚಾರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಚಾರ ಬಂದ್ ಮಾಡಿದ್ದ ಭಾರತೀಯ ರೈಲ್ವೇ, ಇದೀಗ ಒಂದೂವರೆ ತಿಂಗಳ ನಂತರ ರೈಲು ಸಂಚಾರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ ನೀಡಿದೆ.
ಸದ್ಯ ತನ್ನ ಸೇವೆ ಆರಂಭ ಹಿನ್ನೆಲೆ ನೈರುತ್ಯ ರೈಲ್ವೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆಯ್ದ ೧೨ ನಗರಗಳಿಗೆ ರೈಲ್ವೆ ಸಂಚಾರ ಆರಂಭವಾಗುತ್ತಿದೆ. ದೆಹಲಿಯಿಂದ ಬೆಂಗಳೂರಿಗೆ ರೈಲು ಬರಲಿದೆ.
ಐಆರ್ಸಿಟಿಸಿ ವೆಬ್ ಸೈಟ್ ಮೂಲಕ ಮುಂಗಡ ಕಾಯ್ದಿರಿಸಿದವರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ರೈಲು ಬರುವ ಮುನ್ನ ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದೆ. ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರೈಲ್ವೆ ಪ್ಲಾಟ್ ಫಾರ್ಮ್ ಗಳನ್ನ ಶುಚಿಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment