ಮೊಬೈಲ್ ಫೀವರ್ ಕ್ಲಿನಿಕ್‌ಗೆ ಚಾಲನೆ

ಬೆಂಗಳೂರು: ಮಹಾಮಾರಿ ಕೋವಿಡ್-೧೯ ಹಿನ್ನೆಲೆ ಸಿಎಂ ಯಡಿಯೂರಪ್ಪ ಸಂಚಾರಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದ ಅವರು,ಬಳಿಕ ಮಾತನಾಡಿ, ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡುತ್ತದೆ.
ನಾಲ್ಕು ಬಸ್‌ಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಮಾಡಲಾಗಿದೆ. ಈಗಾಗಲೇ ಮೈಸೂರು, ಮಂಗಳೂರಿನಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ. ಅನಾರೋಗ್ಯ ಕಂಡು ಬಂದರೆ ಮೊಬೈಲ್ ಫೀವರ್ ಕ್ಲಿನಿಕ್‌ಗೆ ಸಂಪರ್ಕಿಸಿ ಅಂತ ಹೇಳಿದರು.
ಇನ್ನು ಇಂದು ಪ್ರಧಾನಿ ಜತೆ ವಿಡಿಯೋ ಕಾನ್ಫರೆನ್ಸ್ ಇದೆ. ನಮ್ಮ ನಿಲುವು ಏನೆಂದು ಅಲ್ಲಿ ಪ್ರಸ್ತಾಪಿಸುತ್ತೇವೆ. ರಾಜ್ಯಕ್ಕಾಗಿ ಪ್ಯಾಕೇಜ್‌ಗೆ ಬೇಡಿಕೆ ಇಡುವ ಬಗ್ಗೆಯೂ ಅಲ್ಲಿ ಚರ್ಚೆ ನಡೆಸುತ್ತೇವೆ ಅಂತ ತಿಳಿಸಿದರು.
ಈ ವೇಳೆ ಸಾರಿಗೆ ಸಚಿವ ಲಕ್ಷಣ್ ಸವದಿ, ಸಂಸದ ತೇಜಸ್ವಿ ಸೂರ್ಯ, ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಸಿ.ಕಳಸದ, ಉಪಸ್ಥಿತಿ ವಹಿಸಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment