ಕೊರೊನಾ ಸ್ಥಿತಿ, ಜನರ ಸಂಕಷ್ಟದ ಬಗ್ಗೆ ಕಾಂಗ್ರೆಸ್ ಚರ್ಚೆ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಪಕ್ಷದ ನಡೆ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಇನ್ನು ಸಭೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment