ದಾವಣಗೆರೆ ಜಿಲ್ಲಾಡಳಿತಕ್ಕೆ 6 ಸಾವಿರ ಮೆಡಿಸನ್ ಕಿಟ್ ಹಸ್ತಾಂತರಿಸಿದ ನಮ್ಮ ಹೋಮಿಯೋಪತಿ

ದಾವಣಗೆರೆ : ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಹಗಲು ರಾತ್ರಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಮ್ಮ ಹೋಮಿಯೋಪತಿ ಸಂಸ್ಥೆವತಿಯಿ0ದ ಮೆಡಿಸನ್ ಕಿಟ್‌ಗಳನ್ನು ವಿತರಿಸಲಾಗಿದೆ.

ಅಂದ ಹಾಗೇ ದಾವಣಗೆರೆಯಲ್ಲಿ ನಮ್ಮ ಹೋಮಿಯೋಪತಿ ಸಂಸ್ಥೆ ಸುಮಾರು ೬ ಸಾವಿರ ಮೆಡಿಸನ್ ಕಿಟ್‌ಗಳನ್ನು ಜಿಲ್ಲಾಧಿಕಾರಿ ಡಿಸಿ ಮಹಾಂತೇಶ್ ಆರ್. ಬೀಳಗಿ ಅವರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ,ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್ ಗೌಡ, ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಿರ್ದೇಶಕ ಡಾ.ಮಂಜುನಾಥ್ ಸೇರಿದಂತೆ ನಮ್ಮ ಹೋಮಿಯೋಪತಿ ಸಂಸ್ಥೆ ಸಿಬ್ಬಂದಿ ಹಾಜರಿದ್ದರು.

ಇದೇ ವೇಳೆ ದಾವಣಗೆರೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಈ ಕಿಟ್ ಹೆಚ್ಚಿನ ಉಪಯೋಗವಾಗಲಿದೆ ಎಂದು ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ

Please follow and like us:

Related posts

Leave a Comment