ಕುಡಿದ ಮತ್ತಲ್ಲಿ ಈ ಚಾಲಕ ಏನ್ ಮಾಡ್ದ ಗೊತ್ತಾ..?

ಬಾಗಲಕೋಟೆ:ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ.
ಅಂದ ಹಾಗೆ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು,ಅವರನೆಲ್ಲಾ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಇದರಲ್ಲಿ ಮಹಿಳೆ ಹಾಗೂ ಬಾಲಕಿ ಸ್ಥಿತಿ ಗಂಭೀರಗೊAಡಿದ್ದು,ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಗುಳೇದಗುಡ್ಡ ತಾಲೂಕಿನ ಮಂಗಳಗುಡ್ಡ ನಿವಾಸಿ ಪರಸಪ್ಪ ಶಿರಗುಪ್ಪಿ ಕುಡಿದು ಬಸ್ ಚಾಲನೆ ಮಾಡಿದ್ದಾನೆ.ಈ ವೇಳೆ ಕುಡಿದ ಮತ್ತಲ್ಲಿದ್ದ ಪರಸಪ್ಪ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟ್ಯಾಂಕ್ ಬಳಿ ಇದ್ದ ಬಾಲಕಿ, ಯುವಕ ಹಾಗೂ ಮಹಿಳೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಗುಳೇದಗುಡ್ಡ ಪೊಲೀಸರು ಪರಿಶೀಲನೆ ನಡೆಸಿದ್ದು, ಬಸ್ ಹಾಗೂ ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ

Please follow and like us:

Related posts

Leave a Comment