ಮುಳಬಾಗಿಲಿನಲ್ಲಿ ಪ್ರತಿಯೊಬ್ಬರಿಗೂ ಕೊರೊನಾ ಪರೀಕ್ಷೆ..

ಮುಳಬಾಗಿಲು(ಕೋಲಾರ): ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ ಇಂದು ಜಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋಲಾರ ಜಿಲ್ಲೆ ಮುಳಬಾಗಿಲು ಗ್ರಾಮಾಂತರ ಹಾಗೂ ನಗರ ಪ್ರದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅಧಿಕಾರಿಗಳು ಹಾಗೂ ಮುಖಂಡರೊAದಿಗೆ ಭೇಟಿ ಮಾಡಿದರು.
ಸೋಂಕಿತರ ಗ್ರಾಮಗಳತ್ತ ಭೇಟಿ ಮಾಡಿದ ಸಚಿವರು, ಸೋಂಕಿತರ ಟ್ರಾವೆಲ್ ಹಿಸ್ಟರಿಯನ್ನ ಮತ್ತೊಮ್ಮೆ ಪರಿಶೀಲನೆ ಮಾಡಿ, ಸೋಂಕಿತರ ಸಂಪರ್ಕದಲ್ಲಿದ್ದವರನ್ನ ಕ್ವಾರಂಟೇನ್ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.ಜೊತೆಗೆ ಮುಳಬಾಗಿಲು ತಾಲೂಕಿನಾದ್ಯಂತ ಪ್ರತಿಯೊಬ್ಬರಿಗೂ ಸಹ ಕೊರೊನಾ ಪರೀಕ್ಷೆ ಮಾಡಬೇಕೆಂದು ಸೂಚಿಸಿದರು.
ಇನ್ನು ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರವಾಗಿರುವ ಮುಳಬಾಗಿಲು ತಾಲೂಕಿನಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಮೂಲಕ, ಹೊರ ರಾಜ್ಯಗಳಿಂದ ಬಂದAತವರನ್ನ ಸರಿಯಾಗಿ ಪರಿಶೀಲನೆ ನಡೆಸಬೇಕೆಂದು ಹೇಳಿದರು. ಅಲ್ಲದೆ ಅನಾವಶ್ಯಕವಾಗಿ ತಿರುಗಾಡದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದ ಮನವಿ ಮಾಡಿದರು.

ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು(ಕೋಲಾರ)

Please follow and like us:

Related posts

Leave a Comment