ಆರೋಗ್ಯ / HEALTH

ಜೂನ್ ೨ನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ?

Published

on

ಪಿರಿಯಾಪಟ್ಟಣ(ಮೈಸೂರು):ಕೋವಿಡ್-೧೯ ರೋಗ ಕಾರಣದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿAದ ಜೂನ್
೨ನೇ ವಾರದಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಸರಕಾರವೂ ಚಿಂತಿಸುತ್ತಿದೆ ಎಂದು ಪಿರಿಯಾಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿ ಮಾತನಾಡಿದ ಅವರು,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.
ಇನ್ನು ಪರೀಕ್ಷಾ ಸಿದ್ಧತೆಗಾಗಿ ಉತ್ಸಾಹ ತುಂಬುತ್ತಾ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವAತೆ ಹಾಗೂ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಬೋಧನ ಮಾರ್ಗದರ್ಶನ ವೀಕ್ಷಣೆ, ವಾಟ್ಸಪ್ ಗ್ರೂಪ್‌ಗಳಲ್ಲಿ ಅನುಭವಿ ಶಿಕ್ಷಕರಿಂದ ವಿವಿಧ ವಿಷಯಗಳ ಮಾರ್ಗದರ್ಶನ ಕ್ಲಿಪ್‌ಗಳ ವೀಕ್ಷಣೆ ಮಾಡಲು ತಿಳಿಸಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದರು.
ಇದಲ್ಲದೆ, ನಾಳೆ ಬೆಳಿಗ್ಗೆ ೧೦-೩೦ರಿಂದ ಮಧ್ಯಾಹ್ನ ೨-೩೦ರವರೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ವಿಷಯ ಬೋಧನೆ ಶಿಕ್ಷಕರು ತಮ್ಮ ತಮ್ಮ ಶಾಲೆಗಳಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಡನೆ ಫೋನ್- ಇನ್ ಕಾರ್ಯಕ್ರಮ ನಡೆಸಲಿದ್ದಾರೆ.ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆ ಸಿದ್ಧತೆ ಮಾಡಿಕೊಳ್ಳಬೇಕಾದ ಹಾಗೂ ವಿಷಯವಾರು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.ಹೀಗಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆಗೆ ಸಂಬAಧಿಸಿದAತೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಮುಖ್ಯ ಶಿಕ್ಷಕರ ಹಾಗೂ ವಿಷಯ ಶಿಕ್ಷಕರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಲಹೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಜೊತೆಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಕರು ಕರೆ ಮಾಡಿ ಮನೆಯಲ್ಲಿನ ಸಿದ್ಧತೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

ಮಾಗಳಿ ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ (ಮೈಸೂರು)

Click to comment

Trending

Exit mobile version