ಮಳವಳ್ಳಿಯಲ್ಲಿ ಕಡು ಬಡವರಿಗೆ ಆಹಾರ ಕಿಟ್ ವಿತರಣೆ

ಮಳವಳ್ಳಿ(ಮಂಡ್ಯ): ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಡು ಬಡವರಿಗೆ ಮಳವಳ್ಳಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾವತಿಯಿಂದ ಆಹಾರ ಕಿಟ್ ವಿತರಣೆ ಜೊತೆಗೆ ಕೊರೊನಾ ವಾರಿಯರ್ಸ್ ಟ್ರಾಫಿಕ್ ಪೊಲೀಸ್ ರಾಜು ಅವರಿಗೆ ಸನ್ಮಾನ ಕೂಡ ಮಾಡಲಾಯಿತು.
ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆ ಕಚೇರಿಯಲ್ಲಿ ವೇದಿಕೆ ತಾಲ್ಲೂಕು ಅಧ್ಯಕ್ಷ ಮಹೇಶ್ ಹಾಗೂ ಅಂಬೇಡ್ಕರ್ ವಿವಿದ್ಧೋದೇಶ ಸಹಕಾರ ಸಂಘದ ಕಾರ್ಯದರ್ಶಿ ವಿ.ನಂಜುAಡಸ್ವಾಮಿ ನೇತೃತ್ವದಲ್ಲಿ ಕಿಟ್ ವಿತರಣೆ ಹಮ್ಮಿಕೊಳ್ಳಲಾಗಿತ್ತು.
ಇನ್ನು ವೇದಿಕೆ ತಾಲ್ಲೂಕು ಅಧ್ಯಕ್ಷ ಮಹೇಶ್ ಮಾತನಾಡಿ,ಸಂಕಷ್ಟದಲ್ಲಿರು ಕಡುಬಡವರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಕಾಂತರಾಜು,ಅAಬೇಡ್ಕರ್ ವಿವಿದ್ಧೋದೇಶ ಸಹಕಾರ ಸಂಘದ ಕಾರ್ಯದರ್ಶಿ ವಿ.ನಂಜುAಡಸ್ವಾಮಿ, ಡಿಎಸ್‌ಎಸ್ ಸಂಚಾಲಕ ಯತೀಶ್,ಜೆಡಿಎಸ್ ನಂಜುAಡಸ್ವಾಮಿ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

ಎ.ಎನ್.ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ(ಮಂಡ್ಯ)

Please follow and like us:

Related posts

Leave a Comment