ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಿ..

ಸಿಂಧನೂರು(ರಾಯಚೂರು):ಮಲೇರಿಯಾ ಮತ್ತು ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮಾಡಿಸಬೇಕು ಎಂದು ಸಿಂಧನೂರು ತಾಲೂಕು ದಂಡಾಧಿಕಾರಿ ಮಂಜುನಾಥ ಭೋಗವತಿ ಸೂಚನೆ ನೀಡಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಆಚರಣೆÀ ಕಾರ್ಯಕ್ರಮದಲ್ಲಿ ಮಾತನಾಡಿ, ಮಲೇರಿಯಾ ಮತ್ತು ಡೆಂಗ್ಯೂ ಜ್ವರ ಬರುವುದು ತಡೆಗಟ್ಟಲು ಸಾರ್ವಜನಿಕ ಆರೋಗ್ಯ ಇಲಾಖೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ನಗರಸಭೆ,ಅರಣ್ಯ ಇಲಾಖೆ,ಸಾರಿಗೆ ಇಲಾಖೆ ಮುಂಜಾಗ್ರತೆಯ ವಹಿಸಬೇಕು ಎಂದು ಸೂಚಿಸಿದರು.
ಮಲೇರಿಯಾ ಮತ್ತು ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತಯ ಮೂಲಕ ಜನರಲ್ಲಿ
ಜಾಗೃತಿ ಮಾಡಿಸಬೇಕು.ನಗರದಲ್ಲಿ ಘನತ್ಯಾಜ್ಯ ವಸ್ತುಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ನಂತರ ತಾಲೂಕು ಸಾರ್ವಜನಿಕ ಮುಖ್ಯ ಆರೋಗ್ಯಧಿಕಾರಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರ ಸಭೆಯ ಪರಿಸರ ಇಂಜಿನಿಯರ್ ಸುಬ್ರಹ್ಮಣ್ಯ ಮಂಡ್ಯ, ನಾಗರತ್ನ, ಜೀವನೇಶ್ವರಯ್ಯ, ರಂಗನಾಥ ಜಿ.ಲೋಕೇಶ್ ಕುಮಾರ್ ಹಣಗಿ ಸೇರಿದಂತೆ ಇತರರು ಹಾಜರಿದ್ದರು.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು(ರಾಯಚೂರು)

Please follow and like us:

Related posts

Leave a Comment