ಆರೋಗ್ಯ / HEALTH

ಜೂ. 25ರಿಂದ ಜು.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Published

on

ಬೆಂಗಳೂರು: ಜೂ. ೨೫ರಿಂದ ಜು. ೪ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೮,೪೮,೧೯೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬಹಳಷ್ಟು ಚರ್ಚೆ ಮಾಡಿ,ದಿನಾಂಕವನ್ನು ನಿರ್ಧರಿಸಿದ್ದೇವೆ. ಜೂನ್ ೨೫ರಿಂದ ೪ ಜುಲೈವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಿದ್ದೇವೆ ಎಂದರು.
ಇನ್ನು ೨೮೭೯ ಪರೀಕ್ಷಾ ಕೇಂದ್ರಗಳಲ್ಲಿ ೪೩,೭೨೦ ಕೊಠಡಿಗಳನ್ನು ಪರೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದ್ದು,ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆಯಂತೆ ಆಸನದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಸ್ಕೌಟ್ಸ್ ಅಂಡ್ ಗೈಡ್ಸ್ನಿಂದ ಮಾಸ್ಕ್ ವಿತರಣೆ ನಡೆಯಲಿದೆ.ಜೊತೆಗೆ ಎಲ್ಲಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಬಳಸಲು ಸೂಚನೆ ನೀಡಲಾಗಿದೆ ಎಂದರು.
ಇದಲ್ಲದೆ,ಎಲ್ಲಾ ಪರೀಕ್ಷಾ ಕೇಂದ್ರಗಳ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಾಯಕರು ಸೇವೆ ಸಲ್ಲಿಸುತ್ತಾರೆ.ಜೊತೆಗೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಅನಾರೋಗ್ಯದ ಸಮಸ್ಯೆ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ. ಒಂದು ವೇಳೆ ವಿದ್ಯಾರ್ಥಿಗಳ ಆರೋಗ್ಯ ಅನಾರೋಗ್ಯದಿಂದ ಕೂಡಿದ್ದರೇ, ಅವರಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷೆ ಪ್ರಾರಂಭ ಆಗೋದಕ್ಕೂ ಮೊದಲು ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ಸ್ಕ್ರೀನ್ ಜತೆಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು, ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗೆಬಿಡಲಾಗುವುದು. ಮತ್ತು ಅವರಿಗೆ ಎಲ್ಲ ರೀತಿಯ ಆರೋಗ್ಯ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಸಚಿವರು, ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳು, ವಸತಿ ಶಾಲೆಗಳು ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳ ಹಾಸ್ಟೆಲ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸಿಕೊಳ್ಳುತ್ತಿರುವುದರಿಂದ ಈ ಹಾಸ್ಟೆಲ್ ವಾಸಿಗಳಾಗಿದ್ದ ಮಕ್ಕಳು ತಂತಮ್ಮ ಗ್ರಾಮಗಳಿಗೆ ಹೋಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಆವರು ನೊಂದಾಯಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲವಾದ್ದರಿಂದ ಅಂತಹ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಪ್ರಸ್ತುತ ತಂಗಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರದ ಮೂಲಕ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತಂತೆ ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿಚ್ಛಿಸುವ ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಈ ತಿಂಗಳ ೨೫ ರೊಳಗೆ ಸಂಪರ್ಕಿಸಿ ವಿವರಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.ಇದೇ ರೀತಿ ಯಾವುದಾದರೂ ವಲಸೆ ಕಾರ್ಮಿಕರ ಕುಟುಂಬಗಳ ಮಕ್ಕಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಲ್ಲಿ ಅಂತಹ ಮಕ್ಕಳಿಗೂ ಸಹ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶ ನೀಡಲಾಗಿದೆ.ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೇರೆ ರಾಜ್ಯಗಳಿಂದ ಬಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ವಿವರಿಸಿದರು.
ಇನ್ನು ಇಂಗ್ಲಿಷ್, ಸಮಾಜ ವಿಜ್ಞಾನ, ಗಣಿತ, ವಿಜ್ಞಾನ, ಒಟ್ಟು ನಾಲ್ಕು ವಿಷಯಗಳಿಗೆ ಒಂದೊAದು ದಿನದ ಅಂತರ ಮಾತ್ರ ಇರುತ್ತದೆ. ಒಟ್ಟು ಹತ್ತು ದಿನಗಳ ಪರೀಕ್ಷೆ ಇದಾಗಿರಲಿದೆ.ಕೆಲವು ತಜ್ಞರು ಪರೀಕ್ಷೆ ಬೇಡ ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಪರೀಕ್ಷೆ ನಡೆಸಬೇಕೆಂಬುದು ಸರ್ಕಾರದ ನಿಲುವು ಎಂದು ಸುರೇಶ್ ಕುಮಾರ್ ಹೇಳಿದರು.
ಒಂದು ತಿಂಗಳ ನಂತರ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮೌಲ್ಯಮಾಪನಕ್ಕೆ ಒಂದು ತಿಂಗಳ ಕಾಲಾವಕಾಶ ಬೇಕಿದೆ. ಫಲಿತಾಂಶ ಬಳಿಕ ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುತ್ತದೆ.ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ ಅಂತಹ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version