ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಕಾರ್ಖಾನೆ ನೌಕರ ಸಾವು

ನಂಜನಗೂಡು(ಮೈಸೂರು): ಮೈಸೂರು-ನಂಜನಗೂಡು ರಾಷ್ಟಿçÃಯ ಹೆದ್ದಾರಿಯಲ್ಲಿ ಬೈಕ್‌ಗೆ ಹಿಂಬದಿಯಿAದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ಖಾನೆಯೊಂದರ ನೌಕರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ರಸ್ತೆಯ ಮಲ್ಲನಮೂಲೆ ಮಠದ ಹತ್ತಿರ ನಡೆದಿದೆ.
ನಗರದ ಶಿಕ್ಷಕರ ಬಡಾವಣೆಯ ನಿವಾಸಿ, ನಗರಸಭಾ ಮಾಜಿ ಸದಸ್ಯೆ ಸುಧಾ ಮಹೇಶ್ ಪುತ್ರ ಪ್ರವೀಣ್(೨೯) ಮೃತಪಟ್ಟವನಾಗಿದ್ದು, ಈತ ನಂಜನಗೂಡಿನ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಲ್ ಬರ್ಗ್ ಕಾರ್ಖಾನೆಯಲ್ಲಿ ಸೂಪರ್ ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ.
ಅಂದ ಹಾಗೇ ಪ್ರವೀಣ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುವಾಗ ಮಲ್ಲನಮೂಲೆ ಮಠದ ಬಳಿ ಕಾರು ಹಿಂಬದಿಯಿAದ ಡಿಕ್ಕಿ ಹೊಡೆದಿದೆ. ಪರಿಣಾಮ ಈ ವೇಳೆ ತಲೆಗೆ ತೀವ್ರ ಪೆಟ್ಟಾಗಿ ಸವಾರ ಪ್ರವೀಣ್ ಮೃತಪಟ್ಟಿದ್ದಾನೆ.
ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿAದ ಮನೆಯಲ್ಲೇ ಇದ್ದ ಮೃತ ಪ್ರವೀಣ್ ಲಾಕ್‌ಡೌನ್ ನಂತರ ಕೆಲಸಕ್ಕೆ ಹಾಜರಾದ ಮೊದಲ ದಿನವೇ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು,ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಇನ್ನು ಈತ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರು ಆಗಮಿಸಿ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ.ಅಲ್ಲದೆ, ಅಪಘಾತಕ್ಕೆ ಕಾರಣವಾದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬAಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು(ಮೈಸೂರು)

Please follow and like us:

Related posts

Leave a Comment