ಕೋವಿಡ್-19 : ಆಸ್ಪತ್ರೆಯಿಂದ ಬಿಡುಗಡೆಗೊಂಡ ಇಬ್ಬರು ಗುಣಮುಖರು..

ಧಾರವಾಡ: ಕೋವಿಡ್‌ನಿಂದ ಗುಣಮುಖರಾಗಿರುವ ಇಬ್ಬರು ವ್ಯಕ್ತಿಗಳನ್ನು ಹುಬ್ಬಳ್ಳಿಯ ಕಿಮ್ಸ್ನಿಂದ(ಮೇ ೧೯)ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ ಪಿ- ೪೩೦(೩೦ವರ್ಷ,ಮಹಿಳೆ)ಹಾಗೂ ಆಝಾದ್ ಕಾಲನಿಯ ಪಿ-೪೩೧( ೧೩ ವರ್ಷ,ಬಾಲಕಿ)ಸಂಪೂರ್ಣ ಗುಣಮುಖರಾಗಿದ್ದಾರೆ.
ಅಲ್ಲದೆ,೨೪ ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಜೊತೆಗೆ ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಇದೇ ವೇಲೆ ಜಿಲ್ಲೆಯಲ್ಲಿ ಇದುವರೆಗೆ ೯ ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯಜಿಲ್ಲೆಯ ೧೭ ಮಂದಿ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಚೇತರಿಸಿಕೊಳ್ಳುತ್ತಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment