ಆರೋಗ್ಯ / HEALTH

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

Published

on

ತುಮಕೂರು:ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಉಚಿತವಾಗಿ ೨೪,೦೦೦ ಮಾಸ್ಕ್ಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು.
ಅAದ ಹಾಗೇ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಆಯುಕ್ತೆ ಆಶಾ ಪ್ರಸನ್ನಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಮೂಲಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್. ಕಾಮಾಕ್ಷಿ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಆಶಾ ಪ್ರಸನ್ನಕುಮಾರ್, ರಾಜ್ಯದಲ್ಲಿ ಪರೀಕ್ಷೆ ಬರೆಯುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲು ನಿರ್ಧರಿಸಲಾಗಿತ್ತು. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ತಿಳಿದುಕೊಂಡು ಮಾಸ್ಕ್ ನೀಡಲಾಗಿದೆ.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಸ್ಕೌಟ್ಸ್ ಅಂಡ್ ಗೈಡ್ಸ್ನ ವೇಣುಗೋಪಾಲ್ ಕೃಷ್ಣ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Click to comment

Trending

Exit mobile version