ಆರೋಗ್ಯ / HEALTH

ಧಾರವಾಡದಲ್ಲಿ ಎರಡು ಕೊರೊನಾ ಕೇಸ್ ಪತ್ತೆ

Published

on

ಧಾರವಾಡ: ಧಾರವಾಡದ ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-೧೬೦೯(೨೨,ಪುರುಷ) ಹಾಗೂ ಪಿ-೧೬೧೦(೨೩,ಪುರುಷ)ಇವರಿಬ್ಬರು ನವದೆಹಲಿಯಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳನ್ನು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.
ಇನ್ನು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೩೩ಕ್ಕೆ ಏರಿಕೆಯಾಗಿದೆ.ಈಗಾಗಲೇ ೯ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಧಾರವಾಡ

Click to comment

Trending

Exit mobile version