ಪೊಲೀಸರಿಗೆ ಕೊರೊನಾ ಪರೀಕ್ಷೆ ಕಡ್ಡಾಯ..

ಮದ್ದೂರು(ಮಂಡ್ಯ): ಕ್ವಾರಂಟೈನ್‌ನಲ್ಲಿರುವ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಲಾಗುವುದು ಅಂತ ಗೃಹ ಸಚಿವ ಎಸ್.ಆರ್.ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಿAದ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ೯೬೭ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.ಇದರಲ್ಲಿ ೪೯೦ ಮಂದಿಗೆ ಪರೀಕ್ಷೆ ಮಾಡಲಾಗಿದೆ ಉಳಿದವರಿಗೆ ಶೀಘ್ರವಾಗಿ ಪರೀಕ್ಷೆ ಮಾಡಲಾಗುವುದೆಂದರು.
ಸಿಬ್ಬAದಿಗೆ ಪಿಪಿ ಕಿಟ್, ಸ್ಯಾನಿಟೈಜರ್, ಮಾಸ್ಕ್, ಗ್ಲೌಸ್ ಹಾಗೂ ಅವರ ಕುಟುಂಬದವರ ಆರೋಗ್ಯದ ಬಗೆಯು ಗಮನ ವಹಿಸಲಾಗಿದೆ.
ಈ ಸಂಬAಧ ಹಿರಿಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.ಖೈದಿಗಳಿಂದ ಪೊಲೀಸರಿಗೆ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ೭ ವರ್ಷದ ಒಳಗೆ ಶಿಕ್ಷೆ ಹೊಂದಿರುವರಿಗೆ ಕಾನೂನಡಿಯಲ್ಲಿ ಬೇಲ್ ಮೇಲೆ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.
ಮAಡ್ಯ ಜಿಲ್ಲೆಯಲ್ಲಿ ಕರೊನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಇಡೀ ಜಗತ್ತಿನಲ್ಲಿ ಕರೊನಾ ಇದೆ ಈ ಬಗ್ಗೆ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಅರಿತುಕೊಳ್ಳಬೇಕು ಅಂತ ಟಾಂಗ್ ನೀಡಿದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಮದ್ದೂರು(ಮಂಡ್ಯ)

Please follow and like us:

Related posts

Leave a Comment