ದಲಿತ ಚಿಂತಕ ಆನಂದ್ ತೇಲ್ತುಂಬ್ಲೆ ಬಿಡುಗಡೆ ಮಾಡಿ..

ಸಿಂಧನೂರು(ರಾಯಚೂರು): ದಲಿತ ಚಿಂತಕ ಆನಂದ್ ತೇಲ್ತುಂಬ್ಲೆ ಬಿಡುಗಡೆ ಹಾಗೂ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿಯಿಂದ ಮೌನ ಪ್ರತಿಭಟನೆ ನಡೆಯಿತು.
ಅಂದ ಹಾಗೇ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಿತಿ,ಮಾನವ ಹಕ್ಕು ಪ್ರತಿಪಾದಕ ಡಾ.ಆನಂದ್ ತೇಲ್ತುಂಬ್ಲೆ ಮತ್ತು ಇತರರನ್ನು ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ.ಕೂಡಲೇ ಇವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.
ಇನ್ನು ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ತಹಶೀಲ್ದಾರ್ ಮಂಜುನಾಥ ಭೋಗವತಿ ಮೂಲಕ ಮನವಿ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿತು.ಈ ವೇಳೆ ಸಮಿತಿಯ ಯಂಕಪ್ಪ ಕೆಂಗಲ್,ನರಸಿAಹಪ್ಪ, ಎಂ.ಮುನಿಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು(ರಾಯಚೂರು)

Please follow and like us:

Related posts

Leave a Comment